ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೋನಾ ಅಟ್ಟಹಾಸ

Published : Mar 05, 2021, 08:15 PM ISTUpdated : Mar 05, 2021, 08:45 PM IST
ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೋನಾ ಅಟ್ಟಹಾಸ

ಸಾರಾಂಶ

ಕೊರೋನಾ ಲಸಿಕೆ ಬಂದಾಗಿನಿಂದ ಕಡಿಮೆಯಾಗಿದ್ದ ಮಹಾಮಾರಿ ಕೊರೋನಾ ಮತ್ತೆ ಮೆಲ್ಲಗೆ ತನ್ನ ಆರ್ಭಟ ಶುರು ಮಾಡಿಕೊಂಡಿದೆ. ಅದರಲ್ಲೂ ಕರ್ನಾಟಕದಲ್ಲಿ  ಅಬ್ಬರ ಶುರುವಾಗಿದೆ.

ಬೆಂಗಳೂರು, (ಮಾ.05): ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು ಇಂದು (ಶುಕ್ರವಾರ) 677 ಕೊರೋನಾ ಕೇಸ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

 ಇದರೊಂದಿಗೆ ಸೋಂಕಿತರ ಸಂಖ್ಯೆ 9,53,813ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,354ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೋನಾ ನಿಯಂತ್ರಣ: ಕರ್ನಾಟಕದ ಕ್ರಮಕ್ಕೆ ಕೇಂದ್ರ ಶ್ಲಾಘನೆ

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  427 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,35,066ಕ್ಕೆ ಏರಿಕೆಯಾಗಿದೆ. ಇನ್ನು 6,374 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 112 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ 444 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,07,279ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!