ಕರ್ನಾಟಕ ಕೊರೋನಾ 2ನೇ ಅಲೆ: ಇಲ್ಲಿದೆ ಏ.10ರ ಸಂಕಿ-ಸಂಖ್ಯೆ!

By Suvarna NewsFirst Published Apr 10, 2021, 8:18 PM IST
Highlights

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗಿದ್ದು, ಪಾಸಿಟಿವ್ ಕೇಸ್ ಹಾಗೂ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇನ್ನು ಏ.10ರ ಅಂಕಿ ಸಂಖ್ಯೆ ಇಲ್ಲಿದೆ ನೋಡಿ.

ಬೆಂಗಳೂರು, (ಏ.10): ರಾಜ್ಯದಲ್ಲಿ ಇಂದು (ಶನಿವಾರ) ಮತ್ತೆ ಕೊರೋನಾ ಆರ್ಭಟ ಮುಂದುವರೆದಿದ್ದು, ಒಂದೇ ದಿನ 6,955 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಅಲ್ಲದೇ ಕಿಲ್ಲರ್ ಕೊರೋನಾಗೆ 36 ಸೋಂಕಿತರು ಬಲಿಯಾಗಿದ್ದಾರೆ.

ಇದರಿಂದಾಗಿ ಸೋಂಕಿತರ ಸಂಖ್ಯೆ 10,55,040ಗೆ ಏರಿಕೆಯಾಗಿದ್ರೆ, 10,55,040 ಜನರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ,

ಬೆಂಗಳೂರಿಗರೇ ಎಚ್ಚರ : ಮುಂದಿನ ದಿನಗಳು ಸಂಕಷ್ಟದ ದಿನಗಳಾಗುವ ಸಾಧ್ಯತೆ

ಇನ್ನು ಕಳೆದ 24 ಗಂಟೆಗಳಲ್ಲಿ 3350 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈ ಮೂಲಕ ಇದುವರೆಗೆ 9,80,519 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 61,653 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. 

ಬೆಂಗಳೂರಿನಲ್ಲೂ ಕೊರೋನಾ ಅಬ್ಬರ
ಹೌದು...ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಕೊರೋನಾ ಅಬ್ಬರ ಜೋರಾಗಿದೆ. ಶನಿವಾರ ಬೆಂಗಳೂರಿನಲ್ಲಿ  4,384 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು,  19 ಸೋಂಕಿತರು ಸಾವನ್ನಪ್ಪಿದ್ದಾರೆ.

click me!