ಸಾರಿಗೆ ನೌಕರರು 6ನೇ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಮುಸ್ಕರಕ್ಕೆ ಮುಂದಾಗಿದ್ದಾರೆ. ಇತ್ತ ಸಿಎಂ ಬಿಗ್ ಶಾಕ್ ಕೊಟ್ಟಿದ್ದಾರೆ.
ಬೆಳಗಾವಿ (ಏ.06): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಏ.7ರಂದು ಬಸ್ ಸಂಚಾರದಲ್ಲಿ ವ್ಯತ್ಯಾಯವಾಗಲಿದೆ.
ಇನ್ನು ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು (ಮಂಗಳವಾರ) ಬೆಳಗಾವಿಯ ತಾಲೂಕಿನ ಮುತ್ನಾಳದಲ್ಲಿ ಪ್ರತಿಕ್ರಿಯಿಸಿದ್ದು, ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಳೆ (ಏ.07) ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ!
6ನೇ ವೇತನ ಜಾರಿ ಪ್ರಶ್ನೆಯೇ ಇಲ್ಲ. ಇದು ಅಸಾಧ್ಯ. ಶೇಕಡ 8 ರಷ್ಟು ವೇತನ ಹೆಚ್ಚಳ ಮಾಡಲು ಯೋಚಿಸಿದ್ದು ಅದನ್ನು ಕೊಡುತ್ತೇವೆ. ಉದ್ದೇಶಪೂರ್ವಕವಾಗಿ ಮುಷ್ಕರ ಮಾಡಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿಯೇ ಮುಷ್ಕರ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು.
ಸಾರಿಗೆ ನೌಕರರ ಒಂಬತ್ತು ಬೇಡಿಕೆಯಲ್ಲಿ ಎಂಟು ಬೇಡಿಕೆ ಈಡೇರಿಸಿದ್ದೇವೆ. ಕೊವಿಡ್‌ನಿಂದ ಎದುರಾದ ಆರ್ಥಿಕ ಸಂಕಷ್ಟದ ನಡುವೆಯೂ ವೇತನ ನೀಡಿದ್ದೇವೆ. ಸರ್ಕಾರದಿಂದಲೇ 1200 ಕೋಟಿ ರೂ. ಸಂಬಳ ಸಾರಿಗೆ ಇಲಾಖೆಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು.