ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು.
ಸೊರಬ (ಜೂ.24): ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. ಚಂದ್ರಗುತ್ತಿ ನಾಡ ಕಚೇರಿ ಉಪ ತಹಸೀಲ್ದಾರ್ ಹಾಗೂ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಸಮ್ಮುಖ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಏಣಿಕೆ ಕಾರ್ಯ ನಡೆಸಲಾಯಿತು.
ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ ಸುಮಾರು .29,36,530 ಕಾಣಿಕೆ ಹೆಚ್ಚುವರಿ ಸಂಗ್ರಹವಾಗಿದೆ. ಫೆಬ್ರವರಿ ಮತ್ತು ಮಾಚ್‌ರ್ ತಿಂಗಳಲ್ಲಿ ಹುಂಡಿ ಹಣ ಎಣಿಸಿದಾಗ .41,23,920 ಸಂಗ್ರಹವಾಗಿತ್ತು. ಕೇವಲ 5 ತಿಂಗಳಿನಲ್ಲಿ ದೇವಸ್ಥಾನದ ಗರಿಷ್ಠ ಮೊತ್ತದ ಕಾಣಿಕೆ ಹಣ .70,60,450 ಸಂಗ್ರಹವಾಗಿದೆ. ಹಣ ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.
ಸಾವಿಗೆ ಹೆದರದ ಕಾರ್ಯಕರ್ತರು ನಾವು, ಸೋಲಿಗೆ ಹೆದರುತ್ತೇವೆಯೇ?: ಸಿ.ಟಿ.ರವಿ
ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ಮುಜರಾಯಿ ಇಲಾಖೆ ವಿಷಯ ನಿರ್ವಾಹಕರು, ತಾಲೂಕು ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ಮತ್ತು ಚಂದ್ರಗುತ್ತಿ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ಹಾಗೂ ದೇವಸ್ಥಾನದ ಸಿಬ್ಬಂದಿ, ಆರಕ್ಷಕ ಠಾಣೆ ಸಿಬ್ಬಂದಿ ಪಾಲ್ಗೊಂಡಿದ್ದರು. ಇನ್ನು ಶ್ರೀ ರೇಣುಕಾಂಬ ದೇವಸ್ಥಾನದಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ಸಂಗ್ರಹವಾಗುತ್ತಿದೆ. ಆದರೆ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಭಕ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಘಾಟಿ ಸುಬ್ರಹ್ಮಣ್ಯ ಹುಂಡಿಯಲ್ಲಿ 89.02 ಲಕ್ಷ ರು. ಸಂಗ್ರಹ: ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳ ಹಾಗೂ ರಾಜ್ಯದ ಪ್ರಸಿದ್ದ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯದಲ್ಲಿ ಮಾಸಿಕ ಹುಂಡಿ ಹಣ ಎಣಿಕೆ ಕಾರ‍್ಯ ಸೋಮವಾರ ನಡೆಯಿತು. ಈ ಬಾರಿ ಹುಂಡಿಯಲ್ಲಿ ಒಟ್ಟು 89,02,459 ರುಪಾಯಿ ನಗದು, ಸುಮಾರು 3.15 ಕೆ.ಜಿ ಬೆಳ್ಳಿ ಆಭರಣಗಳು ಹಾಗೂ ಕೆಲ ಚಿನ್ನಾಭರಣಗಳು ಸಂಗ್ರಹವಾಗಿವೆ.
ಮದ್ಯ ಮಾರಾಟ ಲಾಭ 20% ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯಗೆ ಮನವಿ
ಹುಂಡಿ ಹಣ ಎಣಿಕೆ ಕಾರ‍್ಯದ ವೇಳೆ ದೇವಾಲಯದ ಕಾರ‍್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಹೇಮಾವತಿ, ದೇವಾಲಯ ನಿರ್ವಾಹಕ ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ ಹಾಗೂ ಬ್ಯಾಂಕ್, ಪೊಲೀಸ್ ಸಿಬ್ಬಂದಿ ಹಾಜರಿದ್ದರು. ಈ ಬಾರಿಯೂ ಸಾರ್ವಜನಿಕರಿಗೆ ಹುಂಡಿ ಹಣ ಎಣಿಕೆ ಅವಕಾಶ ಕಲ್ಪಿಸಲಾಗಿತ್ತು.