70 ಸಾವಿರ ಕೋಟಿ ಎಲೆಕ್ಟ್ರಾನಿಕ್ಸ್‌ ಉತ್ಪನ್ನ ರಫ್ತು: ರಾಜೀವ್‌ ಚಂದ್ರಶೇಖರ್‌

By Govindaraj SFirst Published Nov 18, 2022, 9:28 AM IST
Highlights

ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿ ಕಂಡಕ್ಟರ್‌ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದ್ದು, 2022ರಲ್ಲಿ 70 ಸಾವಿರ ಕೋಟಿ ರು. ಮೌಲ್ಯದ ಎಲೆಕ್ಟ್ರಾನಿಕ್ಸ್‌ ಉತ್ಪನ್ನ ರಫ್ತು ಮಾಡಲಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಮಾಹಿತಿ ನೀಡಿದರು.

ಬೆಂಗಳೂರು (ನ.18): ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿ ಕಂಡಕ್ಟರ್‌ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದ್ದು, 2022ರಲ್ಲಿ 70 ಸಾವಿರ ಕೋಟಿ ರು. ಮೌಲ್ಯದ ಎಲೆಕ್ಟ್ರಾನಿಕ್ಸ್‌ ಉತ್ಪನ್ನ ರಫ್ತು ಮಾಡಲಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಮಾಹಿತಿ ನೀಡಿದರು.

ಬಳ್ಳಾರಿ ರಸ್ತೆಯ ಅರಮನೆಯಲ್ಲಿ ಆಯೋಜಿಸಿರುವ ಮೂರು ದಿನಗಳ ‘ಬೆಂಗಳೂರು ತಂತ್ರಜ್ಞಾನ ಶೃಂಗ’ದ ರಜತ ಮಹೋತ್ಸವದಲ್ಲಿ ಗುರುವಾರ ‘ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿ ಕಂಡಕ್ಟರ್‌ ತಯಾರಿಕೆಯಲ್ಲಿ ಭಾರತದ ಪಾತ್ರ-ಅವಕಾಶಗಳ ಅನಾವರಣ’ ವಿಚಾರ ಗೋಷ್ಠಿಯಲ್ಲಿ ಅವರು ಮಾತನಾಡಿದರು.

2014ರಲ್ಲಿ ಭಾರತದಲ್ಲಿ ಬಳಕೆಯಾಗುತ್ತಿದ್ದ ಶೇ.92ರಷ್ಟು ಮೊಬೈಲ್‌ಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ 2022ರ ವೇಳೆಗೆ ದೇಶದಲ್ಲಿ ಉಪಯೋಗಿಸುತ್ತಿರುವ ಶೇ.97ರಷ್ಟುಮೊಬೈಲ್‌ಗಳನ್ನು ಭಾರತದಲ್ಲೇ ಉತ್ಪಾದಿಸಲಾಗುತ್ತಿದೆ. 2022ರಲ್ಲಿ 70 ಸಾವಿರ ಕೋಟಿ ರು. ಮೌಲ್ಯದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳನ್ನು ಹಲವು ದೇಶಗಳಿಗೆ ರಫ್ತು ಮಾಡಲಾಗಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿ ಕಂಡಕ್ಟರ್‌ ಕ್ಷೇತ್ರಕ್ಕೆ ಆದ್ಯತೆ ನೀಡುತ್ತಿರುವುದರಿಂದ ಇದೆಲ್ಲಾ ಸಾಧ್ಯವಾಗಿದೆ ಎಂದು ಸ್ಪಷ್ಟಪಡಿಸಿದರು.

Jamia Masjid Srirangapatna: ಶ್ರೀರಂಗಪಟ್ಟಣ ದೇಗುಲ ಕೆಡವಿ ಮಸೀದಿ: ಪಿಐಎಲ್‌

ಪ್ರಧಾನಿ ನರೇಂದ್ರ ಮೋದಿ ಅವರು ತಾಂತ್ರಿಕತೆ, ಸಂಶೋಧನೆಗೆ ಒತ್ತು ನೀಡುತ್ತಿದ್ದು, ನವ ಭಾರತ ನಿರ್ಮಾಣದ ಪಣ ತೊಟ್ಟಿದ್ದಾರೆ. ಇದರಿಂದಾಗಿ ಪ್ರಪಂಚವೇ ನಮ್ಮ ಕಡೆ ಗೌರವಯುತವಾಗಿ ನೋಡುತ್ತಿದ್ದು, ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಕಂಪನಿಗಳ ವಿಶ್ವಾಸಾರ್ಹ, ನಂಬಿಕಸ್ಥ ಭಾಗೀದಾರನಾಗಿ ಭಾರತ ಹೊರಹೊಮ್ಮಿದೆ. ಹೂಡಿಕೆಗೆ ಭಾರತ ಪ್ರಶಸ್ತವಾಗಿದ್ದು, ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಪ್ರೋತ್ಸಾಹಧನ ವಿತರಣೆ ಶೀಘ್ರ: ಸ್ಟಾರ್ಟಪ್‌ಗಳನ್ನು ಪ್ರೋತ್ಸಾಹಿಸಲು ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿ ನೀಡುತ್ತಿರುವ ಡಿಸೈನ್‌ ಲಿಂಕ್‌ ಇನ್ಸೆಂಟಿವ್‌(ಡಿಎಲ್‌ಐ) ಕೇಂದ್ರ ಸರ್ಕಾರದ ಹೊಸ ಉಪಕ್ರಮವಾಗಿದೆ. ಆದ್ದರಿಂದ ಪ್ರೋತ್ಸಾಹಧನ ನೀಡುವಲ್ಲಿ ಸ್ವಲ್ಪ ವಿಳಂಬ ಆಗುತ್ತಿರಬಹುದು. ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಕೊರೋನಾ ಬಳಿಕ ಹಲವು ರಾಷ್ಟ್ರಗಳು ಎಂತಹ ಪರಿಸ್ಥಿತಿ ಎದುರಿಸಿವೆ ಎಂಬುದನ್ನು ನಾವು ನೋಡಿದ್ದೇವೆ. ಆದರೆ ನರೇಂದ್ರ ಮೇದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕೊರೋನಾವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಯಿತು. ಕೊರೋನಾವು ದೇಶದ ಜನಜೀವನದ ಮೇಲೆ ಬಹಳಷ್ಟುಪರಿಣಾಮ ಬೀರಿತು. ಆದರೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ವ್ಯಾಕ್ಸಿನ್‌ ಕಂಡುಹಿಡಿದು ಉಚಿತವಾಗಿ ನೀಡಲಾಯಿತು. ನಂತರದ ದಿನಗಳಲ್ಲಿ ದೇಶದಲ್ಲಿ ಡಿಜಿಟಲ್‌ ತಂತ್ರಜ್ಞಾನ ಬಳಕೆ ಗಣನೀಯವಾಗಿ ಹೆಚ್ಚಳವಾಯಿತು ಎಂದು ವ್ಯಾಖ್ಯಾನಿಸಿದರು.

ಶಿಕ್ಷಣ ಕ್ಷೇತ್ರದ ಗೊಂದಲ ಪರಿಹಾರ: ನೂತನ ಶಿಕ್ಷಣ ನೀತಿ(ಎನ್‌ಇಪಿ) ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಇದರಿಂದ ಶಿಕ್ಷಣದಿಂದ ಹೊರಗುಳಿಯವವರ ಸಂಖ್ಯೆ ಕಡಿಮೆಯಾಗಲಿದೆ. ಏಕಕಾಲದಲ್ಲಿ ಎರಡು ಪದವಿ ಪಡೆಯುವುದೂ ಸಾಧ್ಯವಾಗಲಿದೆ. ಎನ್‌ಇಪಿ ಮೂಲಕ ಶಿಕ್ಷಣ ಕ್ಷೇತ್ರದಲ್ಲಿದ್ದ ಗೊಂದಲಗಳನ್ನು ನಿವಾರಿಸಲಾಗುತ್ತಿದೆ. ಉದ್ಯಮಗಳಿಗೆ ಅಗತ್ಯವಿರುವ ಕೌಶಲ್ಯಯುತ ಶಿಕ್ಷಣ ನೀಡುವುದೇ ನಮ್ಮ ಗುರಿಯಾಗಿದೆ ಎಂದು ಸ್ಪಷ್ಟಪಡಿಸಿದರು.

ಘೋಷಣೆಗಳ ಚಾಪಲ್ಯ VS ಸಂಕಲ್ಪದ ಸಾಫಲ್ಯ: ಸಚಿವ ಶ್ರೀರಾಮುಲು

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ನಾವಿದ್ದು, ಮುಂದಿನ 25 ವರ್ಷದ ಬಗ್ಗೆ ಗಮನ ಹರಿಸಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಸಾಧಿಸಿರುವುದನ್ನು ನೋಡಿ ನಾವು ಹೆಮ್ಮೆ ಪಡಬೇಕಿದೆ. ಭವಿಷ್ಯದಲ್ಲಿ ತಂತ್ರಜ್ಞಾನ ಎಷ್ಟುಅವಶ್ಯಕ ಎಂಬುದನ್ನು ಮಂಗಳವಾರ ನಡೆದ ಜಿ-20 ಶೃಂಗಸಭೆಯಲ್ಲಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

click me!