
ಶ್ರೀರಂಗಪಟ್ಟಣ (ನ.8): ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ, ತಮಿಳುನಾಡಿಗೆ ನಿರಂತರವಾಗಿ ನೀರು ಬಿಡುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 98 ಅಡಿಗೆ ಕುಸಿದಿದೆ.
ಕಳೆದ ಏಳೆಂಟು ದಿನಗಳ ಹಿಂದೆ ಮೂರ್ನಾಲ್ಕು ದಿನಗಳ ಕಾಲ ಸುರಿದ ಮಳೆಯಿಂದ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದು 104 ಅಡಿ ನೀರು ತುಂಬಿತ್ತು. ಆದರೆ, ಕಾವೇರಿ ಪ್ರಾಧಿಕಾರದ ಆದೇಶದಂತೆ ಸರ್ಕಾರ ಕಳೆದ ಐದು ದಿನಗಳಿಂದ 7 ಸಾವಿರಕ್ಕೂ ಹೆಚ್ಚಿನ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹಾಗೂ ನಾಲೆಗಳಿಗೆ ಬಿಡುತ್ತಿರುವ ಪರಿಣಾಮ ನೀರಿನ ಮಟ್ಟ 98 ಅಡಿಗೆ ಕುಸಿದಿದೆ. ಹೀಗಾಗಿ ಬೇಸಿಗೆಯಲ್ಲಿ ಬೆಂಗಳೂರು ಸೇರಿದಂತೆ ಕಾವೇರಿ ನೀರು ಅವಲಂಬಿತ ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವವಿದೆ.
ಸದ್ಯ ಡ್ಯಾಂನಲ್ಲಿ 21 ಟಿಎಂಸಿ ನೀರು ಮಾತ್ರ ಶೇಖರಣೆಯಾಗಿದೆ. ಇದರಲ್ಲಿ 6 ಟಿಎಂಸಿ ಡೆಡ್ ಸ್ಟೋರೇಜ್ ಇದ್ದು, ಬಳಕೆಗೆ ಇರೋದು ಕೇವಲ 16 ಟಿಎಂಸಿ ನೀರು ಮಾತ್ರ. ಕಳೆದ ವರ್ಷ ಇದೇ ದಿನ ಅಣೆಕಟ್ಟೆಯಲ್ಲಿ 124.80 ಅಡಿ ನೀರು ಪೂರ್ಣ ಪ್ರಮಾಣದಲ್ಲಿ ಸಂಗ್ರಹವಾಗಿತ್ತು.
ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (7-11-2026):
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ