ಭಾನುವಾರ ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಮುಖ

Published : Oct 18, 2020, 08:40 PM IST
ಭಾನುವಾರ  ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಮುಖ

ಸಾರಾಂಶ

ಕರ್ನಾಟಕದಲ್ಲಿ ಭಾನುವಾರ ಕೊರೋನಾ ಮಹಾಮಾರಿ ಕೊಂಚ ಇಳಿಕೆಯಾಗಿದ್ದು, ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದೆ.

ಬೆಂಗಳೂರು, (ಅ.18): ರಾಜ್ಯದಲ್ಲಿ ಇಂದು (ಭಾನುವಾರ) 7012 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,65,586 ಕ್ಕೆ ಏರಿಕೆಯಾಗಿದೆ.

ಇವತ್ತು 8344 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 6,45,825 ಜನ ಡಿಸ್ಚಾರ್ಜ್ ಆಗಿದ್ದಾರೆ. 1,09,264 ಇವರು ಸಕ್ರಿಯ ಪ್ರಕರಣಗಳಿವೆ. 

ಕರ್ನಾಟಕದ ಶಾಸಕರೊಬ್ಬರ ಪುತ್ರ ಹಠಾತ್ ನಿಧನ, ಮಗನ ಮುಖ ನೋಡದ ಸ್ಥಿತಿಯಲ್ಲಿ ತಂದೆ

ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 51 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ ಮೃತಪಟ್ಟವರ ಸಂಖ್ಯೆ 10,478 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಭಾನುವಾರ 3553 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 3,07,540 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 3845 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 2,39,579 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 64,435 ಸಕ್ರಿಯ ಪ್ರಕರಣಗಳಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಲಾಟೆ, ದೊಂಬಿ, ಗಲಭೆ ಇಲ್ಲದೆ 518 ಆರೆಸ್ಸೆಸ್‌ ಪಥ ಸಂಚಲನ : ಸರ್ಕಾರ
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!