
ಬೆಂಗಳೂರು, (ಆ.16): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 7,040 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,26,966ಕ್ಕೆ ಏರಿಕೆಯಾಗಿದೆ.
ಇನ್ನು 124 ಜನರು ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,945ಕ್ಕೇರಿದೆ. ಇದರಿಂದ ಒಟ್ಟಾರೆ ಮರಣ ಪ್ರಮಾಣ ಶೇ.1,74 ಆದಂತಾಗಿದೆ.
ಕೊರೋನಾ ಅಟ್ಟಹಾಸದ ಮಧ್ಯೆ ಸಮಾಧಾನಕರ ಸುದ್ದಿ: ಸಾವಿನ ಪ್ರಮಾಣದಲ್ಲಿ ಇಳಿಕೆ..!
ಚೇತರಿಕೆ ಪ್ರಮಾಣದಲ್ಲೂ ಶೇ. 62.34ಕ್ಕೆ ಏರಿದ್ದು, ಭಾನುವಾರ ಕೊರೋನಾ ಸೋಂಕಿನಿಂದ 6,683 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯ 83,191 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ವರದಿ
ಬೆಂಗಳೂರಿನಲ್ಲಿ ಇಂದು (ಭಾನುವಾರ) 2231 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 2359 ಜನ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 49 ಮಂದಿ ಸಾವನ್ನಪ್ಪಿದ್ದಾರೆ. 34,583 ಸಕ್ರಿಯ ಪ್ರಕರಣಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ