ಕರ್ನಾಟಕದಲ್ಲಿ ಶನಿವಾರ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು...!

Published : Aug 22, 2020, 08:16 PM ISTUpdated : Aug 22, 2020, 08:22 PM IST
ಕರ್ನಾಟಕದಲ್ಲಿ ಶನಿವಾರ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು...!

ಸಾರಾಂಶ

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರಿಗಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಹೆಚ್ಚಾಗಿದೆ. ಇದು   ಹೊಸ ಆಶಾಭಾವನೆ ಮೂಡಿಸಿದೆ. 

ಬೆಂಗಳೂರು, (ಆ.22): ರಾಜ್ಯದಲ್ಲಿ ಇಂದು (ಶನಿವಾರ) 7330 ಜನರಿಗೆ ಕೊರೋನಾ ಪಾಸಿಟಿವ್  ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ.

ಇನ್ನು ಸಂತಸ ಸಂಗತಿ ಅಂದ್ರೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 7626 ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ ಶನಿವಾರ ಕೊರೋನಾ ಸೋಂಕಿತರ ಕೇಸ್‌ಗಿಂತ ಗುಣಮುಖರಾದವರೇ ಹೆಚ್ಚಾಗಿದ್ದಾರೆ. ಇದು ಹೊಸ ಆಶಾಭಾವನೆ ಮೂಡಿಸಿದೆ.  

ಚೀನಿಯರ ಮೇಲೆ ಕಠಿಣ ವೀಸಾ ನೀತಿ, ವೇದಾಂತ ಕಡೆ ತಿರುಗಿದ ನಟಿ: ಆ.22ರ ಟಾಪ್ 10 ಸುದ್ದಿ!

ಇಲ್ಲಿಯವರೆಗೆ ಒಟ್ಟು 1,84,568 ಸೊಂಕಿತರು ಚೇತರಿಸಿಕೊಂಡಿದ್ದು, ಪ್ರಸ್ತುತ ಒಟ್ಟು 82,677 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿದ್ರೆ, 727 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಗಳಲ್ಲಿ 93 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದರೊಂದಿಗೆ ಮೃತಪಟ್ಟವರ ಸಂಖ್ಯೆ 4615 ಆಗಿದೆ. ಬೆಂಗಳೂರಿನಲ್ಲಿ 2979 ಹೊಸ ಪ್ರಕರಣ ದಾಖಲಾಗಿದ್ದು 28 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 1663 ಜನ ಮೃತಪಟ್ಟಿದ್ದಾರೆ.

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!