ಕರ್ನಾಟಕದಲ್ಲಿ ಕೊಂಚ ತಗ್ಗಿದ ಕೊರೋನಾ: ಸೋಮವಾರ ಗುಣಮುಖರಾದವರ ಸಂಖ್ಯೆಯೇ ಹೆಚ್ಚು..!

By Suvarna News  |  First Published Sep 21, 2020, 7:12 PM IST

ಸೋಮವಾರ ಕರ್ನಾಟಕದಲ್ಲಿ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಹಾಗಾದ್ರೆ, ಪಾಸಿಟಿವ್ ಪ್ರಕರಣಗಳೆಷ್ಟು? ಡಿಸ್ಚಾರ್ಜ್ ಆದವರ ಸಂಖ್ಯೆ ಈ ಕೆಳಗಿನಂತಿದೆ.


ಬೆಂಗಳೂರು, (ಸೆ.21) : ಕರ್ನಾಟಕದಲ್ಲಿ ಇಂದು (ಸೋಮವಾರ) 7,339 ಹೊಸ ಕೋವಿಡ್ ಪಾಸಿಟಿವ್ ಕೇಸ್ ದೃಢಪಟ್ಟಿವೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. 7,339 ಹೊಸ ಪ್ರಕರಣಗಳೊಂದಿಗೆ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5,26,876ಕ್ಕೆ ಏರಿಕೆಯಾಗಿದೆ.

Latest Videos

undefined

ಕೊರೋನಾ ಲಸಿಕೆ ಉತ್ಪಾದನೆ; ಭಾರತದ ಮುಂದೆ ಹಲವು ಸವಾಲು!

122 ಜನರು ಕರ್ನಾಟಕದಲ್ಲಿ ಸೋಮವಾರ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. 9925 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ಕರ್ನಾಟಕದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 95,335.

ರಾಜ್ಯದಲ್ಲಿ ಇದುವರೆಗೂ ಕೋವಿಡ್ ಸೋಂಕಿನಿಂದಾಗಿ 8,145 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಗುಣಮುಖರಾದವರ ಸಂಖ್ಯೆ 423377. ಐಸಿಯುನಲ್ಲಿ 809 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2886 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

click me!