ಶುಭ ಶುಕ್ರವಾರ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು

Published : Oct 16, 2020, 08:08 PM IST
ಶುಭ ಶುಕ್ರವಾರ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು

ಸಾರಾಂಶ

ಕರ್ನಾಟಕದಲ್ಲಿ ಶುಕ್ರವಾರ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದೆ.

ಬೆಂಗಳೂರು, (ಅ.16): ರಾಜ್ಯದಲ್ಲಿ ಇಂದು (ಶುಕ್ರವಾರ)  7542 ಜನರಿಗೆ ಕೊರೋನಾ ಪಾಸಿಟಿವ್  ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,51,390 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 73 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 10,356 ಮಂದಿ ಸಾವನ್ನಪ್ಪಿದ್ದಾರೆ. ಇನ್ನು  ಶುಕ್ರವಾರ 8580 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರಿಗಿಂತ ಅದರಿಂದ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾದಂತಾಗಿದೆ.

ಕೇಂದ್ರದಿಂದ ಮಹತ್ವದ ಸೂಚನೆ: ರಾಜ್ಯದಲ್ಲಿ ಶಾಲೆ-ಕಾಲೇಜು ಪ್ರಾರಂಭಕ್ಕೆ ಸುಳಿವು ಕೊಟ್ಟ ಡಿಸಿಎಂ 

7,51,390  ಸೋಂಕಿತರ ಪೈಕಿ ಇದುವರೆಗೂ 6,28,588 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಪ್ರಸ್ತುತ 1,12,427 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ 3441 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ