ರಾಜ್ಯದಲ್ಲಿ ಶುಕ್ರವಾರ 7,571 ಕೇಸ್: ಬೆಂಗ್ಳೂರಲ್ಲಿ ಲಕ್ಷ ದಾಟಿದ ಸೋಂಕಿತರ ಸಂಖ್ಯೆ

By Suvarna NewsFirst Published Aug 21, 2020, 8:01 PM IST
Highlights

ಕರ್ನಾಟಕದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 7571 ಹೊಸ ಪ್ರಕರಣ ದಾಖಲಾಗಿವೆ.

ಬೆಂಗಳೂರು, (ಆ.21): ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 7,571 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 93 ಮಂದಿ ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 7,571 ಹೊಸ ಪ್ರಕರಣಗಳ ಮೂಲಕ  ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,64,546ಕ್ಕೆ ಏರಿಕೆಯಾಗಿದೆ. ಕೋವಿಡ್-19 ಸೋಂಕಿನಿಂದ ಶುಕ್ರವಾರ 93 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಮೃತರ ಸಂಖ್ಯೆ 4,522ಕ್ಕೇರಿದೆ.

ದೆಹಲಿ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ: ಇಂದು 13 ಮಂದಿ ಬಲಿ, 1250 ಪ್ರಕರಣ ಪತ್ತೆ!

ಇನ್ನು ಇಂದು 6,561 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಒಟ್ಟಾರೆ 2,64,546 ಪ್ರಕರಣಗಳ ಪೈಕಿ 1,76,942 ಮಂದಿ ಚೇತರಿಸಿಕೊಂಡಿದ್ದಾರೆ. ಈ ಮೂಲಕ 83,066 ಸಕ್ರಿಯ ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಬೆಂಗಳೂರು ಅಂಕಿ-ಅಂಶ
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 1,02,770ಕ್ಕೆ ಏರಿಕೆಯಾಗಿದ್ದು, 66602 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.  ಸಕ್ರಿಯ ಪ್ರಕರಣಗಳ ಸಂಖ್ಯೆ 54532ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1635 ಸಾವು ಸಂಭವಿಸಿದೆ.

click me!