ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನು ಮಾರ್ಚ್ 10ರ ಅಂಕಿ ಸಂಖ್ಯೆ ಎಷ್ಟಿದೆ ಎನ್ನುವುದನ್ನು ತಿಳಿಯಿರಿ.
ಬೆಂಗಳೂರು, (ಮಾ.10): ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು (ಬುಧವಾರ) 760 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,56,801ಕ್ಕೆ ಏರಿಕೆಯಾಗಿದೆ.
ಇನ್ನು ಬುಧವಾರ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,379ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೋನಾ ಅಬ್ಬರ. ಇಲ್ಲಿದೆ ಮಾ.9ರ ಅಂಕಿ-ಸಂಖ್ಯೆ
ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 488 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,09,163ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಬುಧವಾರ 331 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,36,947ಕ್ಕೆ ಏರಿಕೆಯಾಗಿದೆ. ಇನ್ನು 7,456 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 115 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದಿನ 10/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/UHThZJKOpi pic.twitter.com/4wLTbZjrCH
— K'taka Health Dept (@DHFWKA)