ಕರ್ನಾಟಕದಲ್ಲಿ ಮಂಗಳವಾರ ಕೂಡ ಕೊರೋನಾ ಅಬ್ಬರ: ಗುಣಮುಖ ಸಂಖ್ಯೆಯಲ್ಲೂ ಹೆಚ್ಚಳ

By Suvarna NewsFirst Published Sep 8, 2020, 9:53 PM IST
Highlights

ಕರ್ನಾಟಕದಲ್ಲಿ ಮಂಗಳವಾರ ಕೂಡ ಕೊರೋನಾ ಅಬ್ಬರ ಮುಂದುವರೆದಿದೆ. ಆದ್ರೆ, ಹೊಸ ಕೇಸಿನ ಸಂಖ್ಯೆ ಮತ್ತು ಗುಣಮುಖರಾದವರ ಸಂಖ್ಯೆ ಸರಿಸಮವಾಗಿದೆ.

ಬೆಂಗಳೂರು, (ಸೆ.08): ರಾಜ್ಯದಲ್ಲಿ ಇಂದು (ಮಂಗಳವಾರ)  7866 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 146 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 412190 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 6680ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 3102 ಜನರಿಗೆ ಕೊರೋನಾ ತಗುಲಿದ್ದು, 55 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 153625 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 2266 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಸಿಸಿಬಿ ವಶಕ್ಕೆ ನಟಿ ಸಂಜನಾ, ಸರಳ ದಸರಾಗೆ ತೀರ್ಮಾನ; ಸೆ.8ರ ಟಾಪ್ 10 ಸುದ್ದಿ!

ಕಳೆದ 24 ಗಂಟೆಗಳಲ್ಲಿ 7803 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 308573 ಜನ ಗುಣಮುಖರಾಗಿದ್ದಾರೆ. ಉಳಿದಂತೆ 96918 ಸಕ್ರಿಯ ಕೇಸ್​ಗಳಿವೆ. ಇದರಲ್ಲಿ 784 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 67443 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 3461119 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

ಜಿಲ್ಲಾವಾರು ಕೊರೋನಾ ಕೇಸ್

click me!