
ವಿಧಾನಸಭೆ(ಫೆ.24): ರಾಜ್ಯ ಸರ್ಕಾರಿ ನೌಕರರಿಗಾಗಿ 7ನೇ ವೇತನ ಆಯೋಗದ ವರದಿ ಜಾರಿಗೆ ಬದ್ಧವಾಗಿದ್ದು, ಮಾಚ್‌ರ್ ಒಳಗಾಗಿ ಆಯೋಗದಿಂದ ಮಧ್ಯಂತರ ವರದಿ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, 7ನೇ ವೇತನ ಆಯೋಗ ಜಾರಿ ಕುರಿತು ವರದಿ ನೀಡಲು ನಿವೃತ್ತ ಮುಖ್ಯ ಕಾರ್ಯದರ್ಶಿ ದಿವಾಕರ್‌ರಾವ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಈ ಆಯೋಗವು ಇನ್ನೂ ವರದಿ ನೀಡದ ಕಾರಣ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ಆಯೋಗದ ಜತೆ ಮಾತನಾಡಿ ಮಾರ್ಚ್ ಒಳಗಾಗಿಯೇ ಮಧ್ಯಂತರ ವರದಿ ಪಡೆಯಲಾಗುವುದು. ತನ್ಮೂಲಕ 7ನೇ ವೇತನ ಆಯೋಗ ವರದಿ ಅನುಷ್ಠಾನಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಜಾರಿಗೊಳಿಸಲು ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ
ರಾಜ್ಯದಲ್ಲಿ ಕೂಡಲೇ 7ನೇ ವೇತನ ಆಯೋಗ ವರದಿ ಜಾರಿ ಮಾಡದಿದ್ದರೆ ಹೋರಾಟ ನಡೆಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಎಚ್ಚರಿಕೆ ನೀಡಿದೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸದಸ್ಯರು ಬಜೆಟ್ ಮೇಲಿನ ಉತ್ತರದ ವೇಳೆಯೇ ವೇತನ ಆಯೋಗ ಜಾರಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದರಂತೆ ಬೊಮ್ಮಾಯಿ ಅವರು ಗುರುವಾರ ಘೋಷಣೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ