ರಾಜ್ಯ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ?

By Girish GoudarFirst Published Mar 15, 2024, 11:10 PM IST
Highlights

ಆಯೋಗ ವರದಿ ಬಂದ ನಂತರ ವೇತನ ಹೆಚ್ಚಿಸೋದಾಗಿ ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಆಯೋಗದ ಅವಧಿ 15.03.2024ರಂದು ಮುಕ್ತಾಯಗೊಂಡಿದೆ. ವೇತನ ಶ್ರೇಣಿಗಳಲ್ಲಿನ ಹೆಚ್ಚಳವನ್ನು ನೌಕರ ಸಮೂಹವು ಒಂದೂವರೆ ವರ್ಷದಿಂದ ನಿರೀಕ್ಷಿಸುತ್ತಿದೆ. 

ಬೆಂಗಳೂರು(ಮಾ.15):  ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಬಹು ದಿನದ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಮಾ.16 ರಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ 10 ಗಂಟೆಗೆ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಲಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ನೇತೃತ್ವದ ನಿಯೋಗ, ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ. 

ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್‌ ಜಾರಿಗೆ ಬದ್ಧ: ಸಚಿವ ಸಂತೋಷ್‌ ಲಾಡ್‌

ಶನಿವಾರ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದು ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಒಂದೊಮ್ಮೆ ದಿನಾಂಕ ಘೋಷಣೆಯಾದರೆ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಮತ್ತೊಂದೆಡೆ, ಆಯೋಗದ ಅವಧಿ ಮಾ.15ಕ್ಕೇ ಮುಕ್ತಾಯ ಆಗಿರುವುದರಿಂದ ಶನಿವಾರವೇ ವರದಿ ಸಲ್ಲಿಕೆಯಾಗಲಿದೆ.

click me!