ಹಣಕಾಸು ಸಂಸ್ಥೆ, ಅಧೀನ ಸಂಸ್ಥೆ ಅಥವಾ ವಸತಿ ಅಭಿವೃದ್ಧಿ ಸಹಕಾರ ಸಂಘಗಳಲ್ಲಿ ವಂಚಿಸಿರುವವರಿಂದ ವಸೂಲಿ ಮಾಡಿದ ಹಣವನ್ನು ನಿಗದಿತ ಅವಧಿಯೊಳಗೆ ಠೇವಣಿದಾರರಿಗೆ ನೀಡುವುದು, ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಅಂಶಗಳನ್ನು ಸೇರಿಸಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಮತ್ತು ಸಂರಕ್ಷಣೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
ಸುವರ್ಣ ವಿಧಾನಸಭೆ(ಡಿ.17): ವಂಚಿಸುವ ಹಣಕಾಸು ಸಂಸ್ಥೆಗಳ ಚೈನ್‌ಲಿಂಕ್ ಸ್ಕೀಂಗಳಿಂದ ಠೇವಣಿದಾರರನ್ನು ರಕ್ಷಿಸುವ ಉದ್ದೇಶದ ‘ರಾಜ್ಯ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ’ ಸೇರಿದಂತೆ ಎಂಟು ವಿಧೇಯಕಗಳನ್ನು ಅಂಗೀಕರಿಸಲಾಯಿತು.
ಹಣಕಾಸು ಸಂಸ್ಥೆ, ಅಧೀನ ಸಂಸ್ಥೆ ಅಥವಾ ವಸತಿ ಅಭಿವೃದ್ಧಿ ಸಹಕಾರ ಸಂಘಗಳಲ್ಲಿ ವಂಚಿಸಿರುವವರಿಂದ ವಸೂಲಿ ಮಾಡಿದ ಹಣವನ್ನು ನಿಗದಿತ ಅವಧಿಯೊಳಗೆ ಠೇವಣಿದಾರರಿಗೆ ನೀಡುವುದು, ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಅಂಶಗಳನ್ನು ಸೇರಿಸಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಮತ್ತು ಸಂರಕ್ಷಣೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ ಒಂದೇ ಹಂತದಲ್ಲಿ ಭೂ ಸ್ವಾಧೀನ: ಸಿದ್ದರಾಮಯ್ಯ
ಕೊಳವೆಬಾವಿ ಮುಚ್ಚದಿದ್ರೆ ಜೈಲು: ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ಅವಘಡಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024ವನ್ನು ಅನುಮೋದಿಸಲಾಯಿತು. ಹೊಸ ತಿದ್ದುಪಡಿಯಂತೆ ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರು. ದಂಡ ವಿಧಿಸುವುದು ಹಾಗೂ ಕೊಳವೆಬಾವಿ ಕೊರೆದ ಸಂಸ್ಥೆಯ ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರು. ದಂಡ ವಿಧಿಸುವ ಅಂಶ ವಿಧೇಯಕದಲ್ಲಿ ಸೇರಿಸಲಾಗಿದೆ.
undefined
ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 12ರಿಂದ 15 ಪ್ರವಾಸಿ ತಾಣಗಳಲ್ಲಿ ರೋಪ್ ವೇ, ಕೇಬಲ್ ಕಾರ್ ನಿರ್ಮಾಣಕ್ಕೆ ಅನುಮತಿ ಹಾಗೂ ನಿರ್ವಹಣೆಯ ಮೇಲುಸ್ತುವಾರಿಗಾಗಿ ಪ್ರತ್ಯೇಕ ಪ್ರಾಧಿಕಾರ ಸ್ಥಾಪನೆಗಾಗಿ ಸಚಿವ ಎಚ್.ಕೆ. ಪಾಟೀಲ್ ಮಂಡಿಸಿದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ರೋಪ್ ವೇ ವಿಧೇಯಕ 2024ನ್ನು ಅನುಮೋದಿಸಲಾಯಿತು.
ಹಾಗೆಯೇ, ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಂ ಸೆಟಲ್‌ಮೆಂಟ್ (ಒಟಿಎಸ್) ಅಡಿ ದಂಡ ಮತ್ತು ಬಡ್ಡಿ ಮನ್ನಾ ಮಾಡಿಕೊಂಡು ತೆರಿಗೆ ಪಾವತಿಸಿದ ಆಸ್ತಿಗಳ ವಿವರ ಬದಲಾವಣೆ ಹಾಗೂ ತೆರಿಗೆ ವ್ಯಾಪ್ತಿಗೆ ತರುವಂಥ ಬಿಬಿಎಂಪಿ (ಎರಡನೇ ತಿದ್ದುಪಡಿ) ವಿಧೇಯಕ 2024ಕ್ಕೆ ಅನುಮೋದಿಸಲಾಯಿತು. ಕಾಯ್ದೆ ಬಗ್ಗೆ ವಿವರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಅಡಿಯಲ್ಲಿ ತಪ್ಪು ಮಾಹಿತಿ ನೀಡಿ ಇದೀಗ ಒಟಿಎಸ್ ಅಡಿ ಬಾಕಿ ತೆರಿಗೆ ಪಾವತಿಸಿದವರ ಮಾಹಿತಿಯನ್ನು ತಿದ್ದುಪಡಿ ಮಾಡುವುದು ಸೇರಿ ಮತ್ತಿತರ ಅವಕಾಶ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದರು.
ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವಣ್ಣನವರ ಜನ್ಮಸ್ಥಳ ಅಭಿವೃದ್ಧಿಗೆ ಸಂಬಂಧಿಸಿ ಹೊಸ ಪ್ರಾಧಿಕಾರ ರಚನೆಗಾಗಿ ಸಚಿವ ಕೃಷ್ಣ ಬೈರೇಗೌಡ ಮಂಡಿಸಿದ, ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024ಕ್ಕೆ ಅನುಮೋದನೆ ನೀಡಲಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಲಹೆಯಂತೆ, ಪ್ರಾಧಿಕಾರದಲ್ಲಿ ಸ್ಥಳೀಯ ಸಂಸದರು ಹಾಗೂ ಮುದ್ದೆಬಿಹಾಳ ಶಾಸಕರನ್ನು ಸೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿತು.
ರಾಯಚೂರು ವಿವಿಗೆ ವಾಲ್ಮೀಕಿ ಹೆಸರು: ರಾಯಚೂರು ವಿಶ್ವವಿದ್ಯಾಲಯಕ್ಕೆ ‘ಆದಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ’ ಎಂದು ನಾಮಕರಣ ಮಾಡುವ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
ಚಾಣಕ್ಯ ವಿಶ್ವವಿದ್ಯಾಲಯದಲ್ಲಿ ಸರ್ಕಾರದ ಪ್ರತಿನಿಧಿ ನೇಮಕ ಮಾಡುವ ಸಂಬಂಧ ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ಒಪ್ಪಿಗೆ ನೀಡಲಾಗಿದೆ. ಸದ್ಯ ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳಿಗೆ ಸರ್ಕಾರದ ಪ್ರತಿನಿಧಿ ಒಬ್ಬರನ್ನು ನೇಮಕ ಮಾಡಲಾಗುತ್ತಿದೆ. ಆದರೆ, ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಅದರಿಂದ ವಿನಾಯಿತಿ ನೀಡಲಾಗಿತ್ತು.
ಸದನದ ಒಳಗೆ- ಹೊರಗೆ ಕಾಂಗ್ರೆಸ್- ಬಿಜೆಪಿ ವಾಗ್ಯುದ್ಧ: 150 ಕೋಟಿ ಜಟಾಪಟಿ
ವಿಧೇಯಕ ಮಂಡಿಸಿ ವಿವರಣೆ ನೀಡಿದ ಕೃಷ್ಣ ಬೈರೇಗೌಡ, ವಂಚಿಸುವ ಹಣಕಾಸು ಸಂಸ್ಥೆಯಿಂದ ವಸೂಲಿ ಮಾಡಲಾದ ಹಣವನ್ನು ಠೇವಣಿದಾರರಿಗೆ ಮರುಪಾವತಿ ಮಾಡುವಾಗ ಸಂಸ್ಥೆ ಕೆಲಸಗಾರರಿಗೆ ಹೆಚ್ಚಿನ ಮರುಪಾವತಿ ಮಾಡಬೇಕಿತ್ತು. ಅದರಿಂದ ನೈಜ ಠೇವಣಿದಾರರಿಗೆ ಸಿಗದಂತಾಗುತ್ತಿದೆ. ಅದನ್ನು ತಪ್ಪಿಸಿ ಠೇವಣಿದಾರರಿಗೆ ಮಾತ್ರ ಪರಿಹಾರದ ಮೊತ್ತ ಸಿಗುವಂತೆ ಮಾಡುವುದು, ಜಾಹೀರಾತು ಪ್ರದರ್ಶನ ನಿಷೇಧಿಸುವುದು ಹಾಗೂ ವ್ಯವಹಾರ ಜಪ್ತಿ ಮಾಡುವ ಅಧಿಕಾರವನ್ನು ಉಪವಿಭಾಗಾಧಿಕಾರಿಗೆ ನೀಡುವ ಅಂಶ ಸೇರಿಸಲಾಗಿದೆ ಎಂದರು.
ಅದರ ಜತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದಾಗುತ್ತಿರುವ ಅಕ್ರಮ ತಡೆಯಲು ಸೂಕ್ತ ಕಾನೂನು ರಚನಗೆ ಪ್ರಸ್ತಾವನೆ ಸಲ್ಲಿಸುವಂತೆ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸದನದಲ್ಲೇ ಕೃಷ್ಣ ಬೈರೇಗೌಡ ಸೂಚಿಸಿದರು.