Latest Videos

ಧಾರ್ಮಿಕ ಪ್ರವಾಸ: 2 ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ ದುರ್ಮರಣ

By Kannadaprabha NewsFirst Published May 25, 2024, 9:51 AM IST
Highlights

ರಾಜ್ಯದಲ್ಲಿ ಶುಕ್ರವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮತ್ತು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಕಾರು ಅಪಘಾತಗಳಲ್ಲಿ ತಿರುಪತಿಗೆ ತೆರಳುತ್ತಿದ್ದ ಹಾಗೂ ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.

ರಾಣೆಬೆನ್ನೂರು/ಮೂಡಿಗೆರೆ(ಮೇ.25):  ರಾಜ್ಯದಲ್ಲಿ ಶುಕ್ರವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮತ್ತು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಕಾರು ಅಪಘಾತಗಳಲ್ಲಿ ತಿರುಪತಿಗೆ ತೆರಳುತ್ತಿದ್ದ ಹಾಗೂ ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.

ಹಾವೇರಿಯಿಂದ ತಿರುಪತಿಗೆ ಹೋಗುತ್ತಿದ್ದ ಎರ್ಟಿಗಾ ಕಾರು ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ರಾಣೆಬೆನ್ನೂರು ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಅಂತರವಳ್ಳಿ ಬ್ರಿಡ್ಜ್ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಹಾವೇರಿಯ ಸುರೇಶ, ಐಶ್ವರ್ಯ, ಚೇತನಾ, ಪವಿತ್ರಾ ಮೃತಪಟ್ಟಿದ್ದಾರೆ. ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್ ಅಪಘಾತ; ಒಂದೇ ಕುಟುಂಬದ 7 ಮಂದಿ ಸಾವು, 25 ಜನರಿಗೆ ಗಾಯ!

ಇನ್ನೊಂದು ಪ್ರಕರಣದಲ್ಲಿ ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸಾಗುತ್ತಿದ್ದ ಚಿತ್ರದುರ್ಗ ಜಿಲ್ಲೆ ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣ ಗ್ರಾಮದ ಒಂದೇ ಕುಟುಂಬದವರಿದ್ದ ವಾಹನ ಸರಣಿ ಅಪಘಾತಕ್ಕೆ ತುತ್ತಾಗಿ ನಾಲ್ವರು ಮೃತಪಟ್ಟಿದ್ದಾರೆ.
ಒಂದೇ ಕುಟುಂಬದ 17 ಮಂದಿ ಓಮಿನಿ, ಆಲೋ ಕಾರಿನಲ್ಲಿ ಚಾರ್ಮಾಡಿ ಮೂಲಕ ಶುಕ್ರವಾರ ಸಂಜೆ ಮೂಡಿಗೆರೆಗೆ ಬರುವಾಗ ಬಣಕಲ್ ಸಮೀಪ ಈ ಅಪಘಾತ ಸಂಭವಿಸಿದೆ. ಓಮಿನಿಯಲ್ಲಿದ್ದ 9 ಮಂದಿ ಪೈಕಿ ಹಂಪಯ್ಯ (65), ಮಂಜಯ್ಯ (65), ಪ್ರೇಮಾ (62) ಸ್ಥಳದಲ್ಲೇ ಮೃತಪಟ್ಟರೆ, ಪ್ರಭಾಕರ್ (45) ಆಸ್ಪತ್ರೆ ಮಾರ್ಗ ಮಧ್ಯ ಸಾವಿಗೀಡಾಗಿದ್ದಾರೆ.

click me!