ಎಂಎ ಇಂಗ್ಲಿಷ್‌ ಅಂತಿಮ ಪರೀಕ್ಷೆ ಬರೆದ 81 ವರ್ಷದ ಹಿರಿಯಜ್ಜ: ಸಾಧನೆಗೆ ಪತ್ನಿಯೇ ಪ್ರೇರಣೆ

By Kannadaprabha News  |  First Published Jun 10, 2023, 7:28 AM IST

ಕಲಿಕೆಗೆ ವಯಸ್ಸು ಎಂಬುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿಕೊಟ್ಟಿದ್ದಾರೆ. 


ವಿಜಯಪುರ (ಜೂ.10): ಕಲಿಕೆಗೆ ವಯಸ್ಸು ಎಂಬುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿಕೊಟ್ಟಿದ್ದಾರೆ. ನಗರದ ಬಿಎಲ್‌ಡಿಇ ಸಂಸ್ಥೆಯ ನರ್ಸಿಂಗ್‌ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂ​ಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂಎ ಇಂಗ್ಲಿಷ್‌ ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಗಮನಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದೆ. ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ, ಈಗಿನ ಯುವಕರಿಗೆ ಮಾದರಿ ಆಗಿದ್ದಾರೆ.

ನಿಂಗಯ್ಯ ಒಡೆಯರ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗುಡೂರು ಬಳಿಯ ಎಸ್‌.ಸಿ. ಹಳ್ಳಿಯ ನಿವಾಸಿ. ಇವರಿಗೆ ಇಬ್ಬರು ಪುತ್ರರು, ಪುತ್ರಿ ಹಾಗೂ ಐದು ಜನ ಮೊಮ್ಮಕ್ಕಳಿದ್ದಾರೆ. ಆದರೆ, ಇವರ ವಿದ್ಯಾರ್ಜನೆಗೆ ಯಾವುದೂ ಅಡ್ಡಿಯಾಗಿಲ್ಲ. ಇವರ ಮಗಳು ಕೂಡ ಪಿಎಚ್‌.ಡಿ ಪದವಿ ಪಡೆದಿದ್ದಾರೆ. ಇವರ ಪುತ್ರರು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

Tap to resize

Latest Videos

108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಕೇಂದ್ರ ಗುತ್ತಿಗೆ ರದ್ದು: ಸಚಿವ ದಿನೇಶ್‌ ಗುಂಡೂರಾವ್‌

ಸರ್ಕಾರಿ ನೌಕರಿಯಲ್ಲಿದ್ದ ಇವರು ಸೇವಾ ನಿವೃತ್ತಿಯ ನಂತರ ಮತ್ತಷ್ಟು ಕಲಿಯಬೇಕು ಎಂಬ ಹಂಬಲದಿಂದ ಈಗಾಗಲೇ ಕನ್ನಡ, ಹಿಂದಿ ವಿಷಯಗಳಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಇಗ್ನೋದಿಂದ ಈಗಾಗಲೇ ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಇವರು ಪಡೆದಿದ್ದಾರೆ. ಆದರೂ ಇವರಿಗೆ ಇನ್ನೂ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆ ಆಗದೇ ಇರುವುದು ಗಮನಾರ್ಹ. ತಮ್ಮ ಈ ಸಾಧನೆಗೆ ಪತ್ನಿಯೇ ಪ್ರೇರಣೆ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ.

ಹಜ್‌ ಭವನಕ್ಕೆ ಸಿದ್ದರಾಮಯ್ಯ 5000 ಕೋಟಿ ನೀಡಿಲ್ಲ: ಜಮೀರ್‌ ಅಹಮದ್‌ ಖಾನ್‌

ನಿಂಗಯ್ಯ ಅವರು ಪರೀಕ್ಷಾ ಕೇಂದ್ರದಲ್ಲಿ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ. ಪರೀಕ್ಷೆಗೆ ಹಾಜರಾಗುತ್ತಿರುವ ಇತರೆ ಅಭ್ಯರ್ಥಿಗಳಿಗೆ ಸ್ಫೂರ್ತಿ ಆಗಿದ್ದಾರೆ ಎಂದು ಇಗ್ನೋ ಅಧ್ಯಯನ ಕೇಂದ್ರದ ಸಂಯೋಜಕ ಡಾ.ನಿಂಗನಗೌಡ ಪಾಟೀಲ ಹೇಳಿದ್ದಾರೆ. ನಿಂಗಯ್ಯ ಒಡೆಯರ ಅವರ ಈ ಹುಮ್ಮಸ್ಸಿನ ಬಗ್ಗೆ ಇಗ್ನೋ ಪ್ರಾಂತ ನಿರ್ದೇಶಕ ಡಾ.ಎ.ವರದರಾಜನ, ಸಹಾಯಕ ನಿರ್ದೇಶಕ ಡಾ.ಬಿ.ಎನ್‌.ದೇವೇಂದ್ರ, ಬಿಎಲ್‌ಡಿಇ ನಸಿಂರ್‍ಗ್‌ ಕಾಲೇಜಿನ ಪ್ರಾಚಾರ್ಯ ಡಾ.ಶಾಲ್ಮೊನ್‌ ಚೋಪಡೆ, ಇಗ್ನೋ ಸಹ ಸಂಯೋಜಕ ಡಾ.ಸತೀಶ ನಡಗಡ್ಡಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

click me!