ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದೆ ಇಂದು ನಿನ್ನೆಗಿಂತ ಸೋಂಕು ಪ್ರಕರಣಗಳು ಸ್ವಲ್ಪ ಮಟ್ಟಿಗೆ ಏರಿಕೆಯಾಗಿದ್ದರು ಹೊಸ ಸೋಂಕು ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ಇದೆ.
ಬೆಂಗಳೂರು, (ಜ.03): ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಇಂದು (ಭಾನುವಾರ) 810 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 9,21,938ಕ್ಕೆ ಏರಿಕೆಯಾಗಿದ್ರೆ, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 8 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 12,107ಕ್ಕೆ ಏರಿಕೆಯಾಗಿದೆ.
undefined
3 ಕೋಟಿ ಜನರಿಗೆ ಉಚಿತ ಲಸಿಕೆ: ಉಳಿದವರಿಗೆ ಲಸಿಕೆ ಉಚಿತವೋ, ಶುಲ್ಕ ವಿಧಿಸಲಾಗುವುದೋ?
ಭಾನುವಾರ ಬೆಂಗಳೂರಿನಲ್ಲಿ 464 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,89,657ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಒಂದೇ ದಿನ 743 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,98,919ಕ್ಕೆ ಏರಿಕೆಯಾಗಿದೆ. ಇನ್ನು 10,893 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 186 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.