ರಾಜ್ಯದಲ್ಲಿ ಸೋಮವಾರ 83 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 51 ಮಂದಿ ಗುಣಮುಖರಾಗಿದ್ದಾರೆ. ಚಿತ್ರದುರ್ಗದಲ್ಲಿ 47 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ.
ಬೆಂಗಳೂರು (ನ.01): ರಾಜ್ಯದಲ್ಲಿ ಸೋಮವಾರ 83 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 51 ಮಂದಿ ಗುಣಮುಖರಾಗಿದ್ದಾರೆ. ಚಿತ್ರದುರ್ಗದಲ್ಲಿ 47 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. 3251 ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.2.6 ರಷ್ಟು ದಾಖಲಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಐದು ಸಾವಿರ ಕಡಿಮೆ ನಡೆದಿವೆ. ಹೀಗಾಗಿ, ಹೊಸ ಪ್ರಕರಣಗಳು 102ರಷ್ಟುಇಳಿಕೆಯಾಗಿವೆ. (ಭಾನುವಾರ 185 ಪ್ರಕರಣ, ಸಾವು ಶೂನ್ಯ).
ಸದ್ಯ 2115 ಸಕ್ರಿಯ ಸೋಂಕಿತರಿದ್ದು, ಈ ಪೈಕಿ 25 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಂದಿ ಐಸಿಯು, 5 ಮಂದಿ ಆಕ್ಸಿಜನ್, 10 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 2090 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ. ಸೋಮವಾರ ಬೆಂಗಳೂರಿನಲ್ಲೇ 67 ಮಂದಿಗೆ ಸೋಂಕು ತಗುಲಿದೆ. ಉಳಿದಂತೆ 8 ಜಿಲ್ಲೆಗಳಲ್ಲಿ ಬೆರಳೆಣಿಕೆ, 21 ಜಿಲ್ಲೆಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.
Corona Crisis: ಕೋವಿಡ್ ಕೇಸ್ ಡಬಲ್: 200ರ ಗಡಿಗೆ ಸೋಂಕು
ಬೆಂಗಳೂರಿನಲ್ಲಿ ಮುಂದುವರಿದ ಕೊರೋನಾ ಕೇಸ್ ಏರಿಳಿತ: ನಗರದಲ್ಲಿ ಸೋಮವಾರ 67 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 22 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ 1865 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 1034 ನಡೆದಿದ್ದು, ಪಾಸಿಟಿವಿಟಿ ದರ ಶೇ.6ರಷ್ಟುದಾಖಲಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಪರೀಕ್ಷೆಗಳು 500 ಕಡಿಮೆ ನಡೆಸಲಾಗಿದ್ದು, ಹೊಸ ಪ್ರಕರಣಗಳು 47 ಇಳಿಕೆಯಾಗಿವೆ. (ಭಾನುವಾರ 114 ಕೇಸ್, ಸಾವು ಶೂನ್ಯ)
ಸದ್ಯ ಸಕ್ರಿಯ ಸೋಂಕಿತರ ಪೈಕಿ 15 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಈ ಪೈಕಿ ಐಸಿಯುನಲ್ಲಿ ಇಬ್ಬರು, ಆಕ್ಸಿಜನ್ ಹಾಸಿಗೆಯಲ್ಲಿ ಇಬ್ಬರು, ಸಾಮಾನ್ಯ ಹಾಸಿಗೆಗಳಲ್ಲಿ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 1019 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ. 89 ಮಂದಿ ಮೊದಲ ಡೋಸ್, 146 ಮಂದಿ ಎರಡನೇ ಡೋಸ್ ಹಾಗೂ 567 ಮಂದಿ ಮುನ್ನೆಚ್ಚರಿಕಾ ಡೋಸ್ ಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೋನಾ ಹೊಸ ತಳಿ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್‌ನ ಒಮಿಕ್ರೋನ್ ತಳಿಯ ಹೊಸ ರೂಪಾಂತರಿ ಬಿಕ್ಯು.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ, ಗುಂಪು ಸೇರುವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಹೊಸ ತಳಿ ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಹತ್ತಿರದ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಿ ಫಲಿತಾಂಶ ದೊರೆಯುವವರೆಗೂ ಸ್ವಯಂ ಪ್ರತ್ಯೇಕವಾಸ ಇರಬೇಕು.
Corona Crisis: ಕರ್ನಾಟಕದಲ್ಲಿ 82 ಮಂದಿಗೆ ಕೊರೋನಾ: ಒಂದೂ ಸಾವಿಲ್ಲ
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ತಕ್ಷಣವೇ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆ ಪಡೆಯಬೇಕು ಎಂದು ಸಲಹೆ ನೀಡಲಾಗಿದೆ. ಹವಾನಿಯಂತ್ರಣ ವ್ಯವಸ್ಥೆ ಇರುವ ಒಳಾಂಗಣ, ಅಗತ್ಯ ಗಾಳಿ- ಬೆಳಕಿಲ್ಲದಿರುವ ಸ್ಥಳಗಳು, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸಬೇಕು. ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣಗಳಲ್ಲಿ ಆಚರಿಸಬೇಕು, ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರಬೇಕು ಎಂದು ಮನವಿ ಮಾಡಿದೆ.