* ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ
* ಹಾಗೇ ಕೊರೋನಾ ರೂಪಾಂತರಿ ಒಮಿಕ್ರಾನ್ ಸಹ ಹೆಚ್ಚಳ
* ಕರ್ನಾಟಕದಲ್ಲಿ ಡಬಲ್ ಆತಂಕ
ಬೆಂಗಳೂರು, (ಡಿ.31): ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ (Coroanvrius) ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ ಒಂದುವಾರದಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರವೂ ಸಹ ಅಲರ್ಟ್ ಆಗಿದೆ.
ರಾಜ್ಯದಲ್ಲಿಇಂದು(ಶುಕ್ರವಾರ) ಒಂದೇ ದಿನ 832 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. 335 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.70 ರಷ್ಟಿದ್ರೆ, ಸಾವಿನ ಪ್ರಮಾಣ ಶೇ 0.96% ಇದೆ.
undefined
Corona, Omicron: ಡಬಲ್ ಶಾಕ್, ಕರ್ನಾಟಕದಲ್ಲಿ ಕೊರೋನಾ ಮಧ್ಯೆ ಒಮಿಕ್ರಾನ್ ಸ್ಫೋಟ
ರಾಜ್ಯದಲ್ಲಿ ಈವರೆಗೆ 30,07,337 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 38,335 ಮಂದಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 29,60,261 ಮಂದಿ ಚೇತರಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪ್ರಸ್ತುತ 8712 ಸಕ್ರಿಯ ಪ್ರಕರಣಗಳಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಬೆಂಗಳೂರು ನಗರದಲ್ಲಿ ಶುಕ್ರವಾರ 656 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. 211 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,63,618 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 16,400 ಮಂದಿ ಮೃತಪಟ್ಟಿದ್ದಾರೆ. ಹಾಗೇ12,39,931 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 7286 ಸಕ್ರಿಯ ಪ್ರಕರಣಗಳಿವೆ.
ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?
ಬೆಂಗಳೂರು ನಗರ 656, ಬಳ್ಳಾರಿ 6, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 5, ಚಾಮರಾನಗರ, ಚಿಕ್ಕಬಳ್ಳಾಪುರ, ರಾಮನಗರ, ಗದಗ, ಉತ್ತರ ಕನ್ನಡ, ವಿಜಯಪುರ 1, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 30, ಧಾರವಾಡ, ಮೈಸೂರು 9, ಹಾಸನ 11, ಕಲಬುರಗಿ 9, ಕೊಡಗು 21, ಕೋಲಾರ 8, ಮಂಡ್ಯ 7, ಶಿವಮೊಗ್ಗ 2, ತುಮಕೂರು 3, ಉಡುಪಿ 35.
ಕೋವಿಡ್ ಚಿಕಿತ್ಸೆಗೆ ಸರ್ ಸಿ.ವಿ.ರಾಮನ್ ಆಸ್ಪತ್ರೆ ಮೀಸಲು
ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಇಂದಿರಾನಗರದ ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯನ್ನು ಮೀಸಲು ಕೋವಿಡ್ ಆಸ್ಪತ್ರೆಯನ್ನಾಗಿ ಗುರುತಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
2020ರಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಬಳಿಕ ಈ ಆಸ್ಪತ್ರೆಯನ್ನು ಮೀಸಲು ಕೋವಿಡ್ ಆಸ್ಪತ್ರೆ ಎಂದು ಗುರುತಿಸಿ, ಎಲ್ಲ ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿತ್ತು. 2021ರಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಅಲ್ಲಿ ಕೋವಿಡೇತರ ರೋಗಿಗಳಿಗೂ ಚಿಕಿತ್ಸೆ ಪುನರಾರಂಭಿಸಲಾಗಿತ್ತು. ಈಗ ಮತ್ತೆ ಹೊಸ ಪ್ರಕರಣಗಳು ಹೆಚ್ಚಳ ಆಗುತ್ತಿರುವುದರಿಂದ ಆಸ್ಪತ್ರೆಯಲ್ಲಿ ಕೋವಿಡೇತರ ಚಿಕಿತ್ಸೆಗಳನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಕೇವಲ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ತಿಳಿಸಿದ್ದಾರೆ.
ರಾಜ್ಯಕ್ಕೆ ಶಾಕ್ ಕೊಟ್ಟ ಒಮಿಕ್ರಾನ್
ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಾಗಲೇ ಕೊರೋನಾ ರೂಪಾಂತರಿ ವೈರಸ್ ಒಮಿಕ್ರಾನ್(Omicron) ರಾಜ್ಯಕ್ಕೆ ಶಾಕ್ ನೀಡಿದ್ದು, ಇಂದು ಒಂದೇ ದಿನ ಕರ್ನಾಟಕದಲ್ಲಿ 23 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ಇಂದು ರಾಜ್ಯದಲ್ಲಿ 23 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಅವರಲ್ಲಿ 19 ಜನರು ವಿದೇಶಗಳಿಂದ ಆಗಮಿಸಿದವರಾಗಿದ್ದಾರೆ. ಅಮೆರಿಕಾ, ಯುರೋಪ್, ಆಫ್ರಿಕಾ ದೇಶಗಳಿಂದ ಬಂದ ಹೆಚ್ಚಿನವರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.