ಕರ್ನಾಟಕದಲ್ಲಿ ಕೊರೋನಾ ಪಾಸಿಟಿವ್ ಕೇಸ್ ಏರಿಕೆ: ಮತ್ತೆ ಶರುವಾಯ್ತು ಆತಂಕ

By Suvarna NewsFirst Published Mar 12, 2021, 8:54 PM IST
Highlights

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದ್ದು, ಪಾಸಿಟಿವ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿವೆ.

ಬೆಂಗಳೂರು, (ಮಾ.12):: ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಇಂದು (ಶುಕ್ರವಾರ) 833 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 9,58,417ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,386ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಶುಕ್ರವಾರ 526 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,10,181ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 545 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,37,898ಕ್ಕೆ ಏರಿಕೆಯಾಗಿದೆ. ಇನ್ನು 8114 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 125 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ದಿನಕ್ಕೆ 300-400 ಪಾಸಿಟಿವ್ ಪಕರಣಗಳು ವರದಿಯಾಗುತ್ತಿದ್ದವು. ಆದ್ರೆ, ಇದೀಗ ಆ ಸಂಖ್ಯೆ ಡಬ್ಬಲ್ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

click me!