
ಬೆಂಗಳೂರು, (ಆ.11): ಕಳೆದ 24 ಗಂಟೆಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಕೊರೋನಾ ರಣಕೇಕೆ ಹಾಕಿದೆ. ಸಂತಸದ ಸಂಗತಿ ಅಂದ್ರೆ ಸೋಂಕಿತರಿಗಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಹೆಚ್ಚಾಗಿರುವುದು ಸಮಾಧಾನ ತಂದಿದೆ.
ಹೌದು... ರಾಜ್ಯದಲ್ಲಿ ಇಂದು (ಮಂಗಳವಾರ) 6,257 ಹೊಸ ಕೊರೋನಾ ಕೇಸ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,88,611ಕ್ಕೆ ಏರಿಕೆಯಾಗಿದೆ.
ಇನ್ನು ಮಂಗಳವಾರ ಒಂದೇ ದಿನ 6473 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಉತ್ತಮ ಬೆಳವಣಿಗೆಯಾಗಿದೆ.
ಒಟ್ಟು ಇದುವರೆಗೆ 1,88,611ರಲ್ಲಿ 1,05,599 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಹೀಗಾಗಿ ರಾಜ್ಯದಲ್ಲಿ 79,606 ಸಕ್ರಿಯ ಕೇಸ್‌ಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 86 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ 3398ಕ್ಕೆ ಏರಿಕೆಯಾಗಿದೆ .
ಬೆಂಗಳೂರು ನಗರ 1610, ಬಳ್ಳಾರಿ 736, ಬೆಳಗಾವಿ 575, ಧಾರವಾಡ 276, ದಕ್ಷಿಣ ಕನ್ನಡ 243, ಮೈಸೂರು 238, ಉಡುಪಿ 219, ರಾಯಚೂರು 201, ಶಿವಮೊಗ್ಗ 189, ದಾವಣಗೆರೆ 172, ಕೊಪ್ಪಳ 169, ಕಲಬುರಗಿ 156, ಹಾಸನ 146, ಮಂಡ್ಯ 141, ಬಾಗಲಕೋಟೆ 135, ವಿಜಯಪುರ 121, ಯಾದಗಿರಿ 102, ರಾಮನಗರ 96, ಚಿಕ್ಕಮಗಳೂರು 93, ತುಮಕೂರು 89, ಗದಗ 78, ಬೀದರ್ ಮತ್ತು ಉತ್ತರ ಕನ್ನಡ 73, ಚಾಮರಾಜನಗರ 72, ಕೋಲಾರ 69, ಚಿತ್ರದುರ್ಗ 47, ಕೊಡಗು 41, ಹಾವೇರಿ 36, ಚಿಕ್ಕಬಳ್ಳಾಪುರ 33 ಮತ್ತು ಬೆಂಗಳೂರು ಗ್ರಾಮಾಂತರ 28 ಸೇರಿದಂತೆ ಒಟ್ಟು 6257 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ