* 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್
* ಇಂದು(ಶನಿವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆ ತೀರ್ಮಾನ
* ಸಿಎಂ ತವರು ಜಿಲ್ಲೆಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನ
ಬೆಂಗಳೂರು, (ಏ.23): ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ಈ ಬಾರಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದ್ದು, ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಇಂದು(ಶನಿವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆ ನಡೆಸಿದ ಅಧಿಕಾರಿಗಳು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
undefined
86ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ದೊಡ್ಡರಂಗೇಗೌಡ್ರು ಆಯ್ಕೆ..!
2021ರ ಫೆ. 26 ರಿಂದ ಮೂರು ದಿನ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದ್ರೆ, ಸಮ್ಮೇಳನ ನಡೆಸುವುದು ಕೋವಿಡ್ ಮಾರ್ಗಸೂಚಿ ಅಡ್ಡಿಯಾಗಿತ್ತು. ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ರಾಜ್ಯ ಸರ್ಕಾರ ಯಾವುದೇ ಸಬೆ ಸಮಾರಂಭವನ್ನು ಆಯೋಜಿಸಿರಲಿಲ್ಲ ಇದೀಗ ಆ ಕಾಲ ಕೂಡಿಬಂದಿದೆ.
ಹಾವೇರಿಯಲ್ಲಿ 86 ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ಜರುಗಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ , ಕಾರ್ಮಿಕ ಸಚಿವ , ಕೃಷಿ ಸಚಿವ , ಸಂಸದ ,
1/2 pic.twitter.com/5PSy6dV1Gs
ಸಭೆಯಲ್ಲಿ ಸಿಎಂ ಮಹತ್ವದ ಸೂಚನೆ
ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಲ್ಲಿ, ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್ ಗಳು ಮತ್ತು ಡಾರ್ಮಿಟರಿಗಳನ್ನು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು. ಪ್ರಮುಖ ಕಲ್ಯಾಣ ಮಂಟಪಗಳನ್ನು ಗುರುತಿಸಿ ಎಂದು ಸಿಎಂ ಸೂಚಿಸಿದರು. ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿಯೂ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು. ಮಾರ್ಗ ಮಧ್ಯೆಯೂ ಉತ್ತಮ ಹೋಟೆಲ್‌ಗಳಿವೆ, ಖಾಸಗಿ ಶಾಲೆಗಳನ್ನು ಸಹ ಬಳಕೆ ಮಾಡಿಕೊಳ್ಳಬಹುದು ಎಂದು ಸೂಚಿಸಿದರು. ತುರ್ತು ಪರಿಸ್ಥಿತಿಗಳಲ್ಲಿ ಬಳಕೆ ಮಾಡಲು ಕುಂಭಮೇಳದಲ್ಲಿ ಆಯೋಜಿಸಿದಂತೆ ಟೆಂಟ್ ಗಳನ್ನು ಉಪಯೋಗಿಸಬಹುದು. ಇವುಗಳ ಬಗ್ಗೆ ಸೂಕ್ತ ನೀಲನಕ್ಷೆ ಸಿದ್ಧಪಡಿಸಲು ತಿಳಿಸಿದರು.
ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯ ಬಗ್ಗೆಯೂ ಸೂಕ್ತ ಯೋಜನೆಗಳನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸಿದ್ಧತೆಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಮತ್ತೊಂದು ಸಭೆ ಕರೆದು, ಅಂತಿಮಗೊಳಿಸುವುದು. ಬಜೆಟ್ ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಪ್ರೋ. ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದು, ಇದೇ ಸೆ.23ರಿಂದ 25ರವರೆಗೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಪ್ರೊ. ದೊಡ್ಡರಂಗೇಗೌಡ್ರು ವಹಿಸಿಕೊಳ್ಳಲಿದ್ದಾರೆ.