ಕರ್ನಾಟಕದಲ್ಲಿ ಕೊರೋನಾ: ಇಲ್ಲಿದೆ ಶುಕ್ರವಾರದ ಅಂಕಿ-ಸಂಖ್ಯೆ

By Suvarna News  |  First Published Oct 2, 2020, 9:32 PM IST

ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಹಾಗಾದ್ರೆ ಇಂದು (ಶುಕ್ರವಾರ) ಸೊಂಕಿತರ ಸಂಖ್ಯೆ ಎಷ್ಟು? ಎಷ್ಟು ಸಾವು..? ಎನ್ನುವ ಮಾಹಿತಿ ಈ ಕೆಳಗಿನಂತಿದೆ.
 


ಬೆಂಗಳೂರು, (ಅ.02) : ರಾಜ್ಯದಲ್ಲಿ ಇಂದು (ಶುಕ್ರವಾರ) 8,793 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6,20,630ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 8,793 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 125 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 9,119 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

Latest Videos

undefined

ಸಾರ್ವಜನಿಕರೇ, ಮಾಸ್ಕ್ ಹಾಕದೇ ಓಡಾಡಬೇಡಿ, ಬೀಳುತ್ತೆ ಭಾರೀ ದಂಡ! 

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 7,094 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,20,630 ಸೋಂಕಿತರ ಪೈಕಿ 1,11,986 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 4,99,506 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 827 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ಕೊರೋನಾ ಕೇಸ್

click me!