ಮಂಡ್ಯದಲ್ಲಿ ನಾಳೆಯಿಂದ ಸಾಹಿತ್ಯ ಸಡಗರ: ಮಧುವಣಗಿತ್ತಿಯಂತೆ ಶೃಂಗಾರಗೊಂಡ ಸಕ್ಕರೆ ನಗರಿ!

By Kannadaprabha News  |  First Published Dec 19, 2024, 8:37 AM IST

ಮೊದಲ ದಿನ ಸಾಧುಕೋಕಿಲ ಮತ್ತು ರಾಜೇಶ್ ಕೃಷ್ಣನ್ ತಂಡದವರಿಂದ ಸಂಗೀತ ಸಂಜೆ, ಡಿ.21ರಂದು ಅರ್ಜುನ್ ಜನ್ಯ ಮತ್ತು ತಂಡದಿಂದ ಸಂಗೀತ ಸಂಜೆ ಹಾಗೂ ಡಿ.22ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪೊಲೀಸ್ ಬ್ಯಾಂಡ್ ಇರಲಿದೆ. ಸಮ್ಮೇಳನಕ್ಕೆ ಆಗಮಿಸುವವರಿಗೆ ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಕೆಎಸ್‌ಆರ್‌ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. 


ಮಂಡ್ಯ(ಡಿ.19):  ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಎಲ್ಲೆಡೆ ಕನ್ನಡ ಬಾವುಟ, ಪತಾಕೆಗಳು ಹಾರಾಡುತ್ತಿದ್ದು, ಸಾಹಿತ್ಯಾಸಕ್ತರನ್ನು ಸ್ವಾಗತಿಸಲು ಮಂಡ್ಯ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. 

ಸಮ್ಮೇಳನಾಧ್ಯಕ್ಷ ಗೊ.ರು. ಚನ್ನಬಸಪ್ಪ ಇಂದು(ಗುರುವಾರ) ಸಂಜೆ ಮಂಡ್ಯಕ್ಕೆ ಆಗಮಿಸಲಿದ್ದು, ಸ್ವಾಗತಕ್ಕೆ ವೇದಿಕೆ ಸಜ್ಜಾಗಿದೆ. ಶುಕ್ರವಾರ ಬೆಳಗ್ಗೆ 6ಕ್ಕೆ ಧ್ವಜಾರೋಹಣ ನೆರವೇರಲಿದ್ದು, 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ. ಹಗಲುವೇಷ, ಮಹಿಳಾ ವೀರಗಾಸೆ, ಗೊರವರ ಕುಣಿತ, ಕಂಸಾಳೆ, ಕರಗ, ಸುಗ್ಗಿ ಕುಣಿತ, ಕೋಲಾಟ ಸೇರಿ 50ಕ್ಕೂ ಹೆಚ್ಚು ಕಲಾ ತಂಡಗಳು, ಪೂರ್ಣಕುಂಭ ಹೊತ್ತ 300 ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೆರವಣಿಗೆಗೆ ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಅವರು ಚಾಲನೆ ನೀಡಲಿದ್ದಾರೆ. 

Tap to resize

Latest Videos

undefined

'ಮನೆಗೊಂದು ಕೋಳಿ, ಊರಿಗೊಂದು ಕುರಿ' ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಅಭಿಯಾನ

ಸಮ್ಮೇಳನಕ್ಕೆ 1 ದಿನ ಸಮ್ಮೇಳನಕ್ಕೆ 70-80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ, ಎರಡು ಸಮಾನಾಂತರ ವೇದಿಕೆ, 60 ಎಕರೆ ಪ್ರದೇಶದಲ್ಲಿ ಪಾರ್ಕಿ೦ಗ್‌ಗೆ ವ್ಯವಸ್ಥೆ ಮಾಡಲಾಗಿದೆ. 55 ವಸ್ತುಪ್ರದರ್ಶನ ಮಳಿಗೆಗಳು, 350 ವಾಣಿಜ್ಯ ಮಳಿಗೆ, 450 ಪುಸ್ತಕ ಮಳಿಗೆಗಳು ತಲೆ ಎತ್ತಿವೆ. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್‌ಗಳನ್ನು ತೆರೆಯಲಾಗಿದೆ. ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ. 150ಕ್ಕೂ ಹೆಚ್ಚುಕಡೆ ಶೌಚಾಲಯ ನಿರ್ಮಾಣ, 6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್‌ಬ್ಯಾಗ್‌ನಲ್ಲಿ ವಸತಿ, ಸಮ್ಮೇಳನದ ಕಿಟ್ ನೀಡಲಾಗುತ್ತಿದೆ. 

ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದ ಸೇರಿದಂತೆ 1 11 ಗೋಷ್ಠಿಗಳು, 2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿಗಳು ಆಯೋಜನೆಗೊಂಡಿವೆ. ಗೊ.ರು.ಚನ್ನಬಸಪ್ಪ ಅವರೇ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡಿರುವ ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ, ಕನ್ನಡದಿಂದ ಅನುವಾದಗೊಂಡಿರುವ ಇಟಲಿಯನ್‌ಗೆ ಖ್ಯಾತ ಕಾದಂಬರಿಕಾರ್ತಿ ತ್ರಿವೇಣಿ ಅವರ ಶರಪಂಚರ ಕಾದಂಬರಿ ಬಿಡುಗಡೆ ಆಗಲಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ಸಮ್ಮೇಳನದ ಸ್ಮರಣಾರ್ಥ 87 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತಿದೆ. 'ಬೆಲ್ಲದಾರತಿ' ಹೆಸರಿನ ಸ್ಮರಣ ಸಂಚಿಕೆ ಬಿಡುಗಡೆಯಾಗಲಿದೆ. 

ಮಂಡ್ಯ ಸಾಹಿತ್ಯ ಸಮ್ಮೇಳನ : ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ

ಮೊದಲ ದಿನ ಸಾಧುಕೋಕಿಲ ಮತ್ತು ರಾಜೇಶ್ ಕೃಷ್ಣನ್ ತಂಡದವರಿಂದ ಸಂಗೀತ ಸಂಜೆ, ಡಿ.21ರಂದು ಅರ್ಜುನ್ ಜನ್ಯ ಮತ್ತು ತಂಡದಿಂದ ಸಂಗೀತ ಸಂಜೆ ಹಾಗೂ ಡಿ.22ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪೊಲೀಸ್ ಬ್ಯಾಂಡ್ ಇರಲಿದೆ. ಸಮ್ಮೇಳನಕ್ಕೆ ಆಗಮಿಸುವವರಿಗೆ ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಕೆಎಸ್‌ಆರ್‌ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. 

ಮೈಸೂರು ಮತ್ತು ಬೆಂಗಳೂರಿನಿಂದ ಮಂಡ್ಯಕ್ಕೆ ಪ್ರತಿ 30 ನಿಮಿಷಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಡಿ.20ರ ಬೆಳಗ್ಗೆ 5 ಗಂಟೆಯಿಂದ ಡಿ. 23ರ ಬೆಳಗ್ಗೆ 6 ಗಂಟೆವರೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅನುಕೂಲ ವಾಗುವಂತೆ ಮಂಡ್ಯದ ಶಾಲಾ- ಕಾಲೇಜು ಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.

click me!