ಕರ್ನಾಟಕದಲ್ಲಿ ಕಡಿಮೆಯಾದ ಕೊರೊನಾ ಸೋಂಕಿನ ಪ್ರಕರಣ

Published : Sep 18, 2021, 08:21 PM IST
ಕರ್ನಾಟಕದಲ್ಲಿ ಕಡಿಮೆಯಾದ ಕೊರೊನಾ ಸೋಂಕಿನ ಪ್ರಕರಣ

ಸಾರಾಂಶ

* ಕರ್ನಾಟಕದಲ್ಲಿ ಕೊರೋನಾ ಏರಿಳಿತ * ರಾಜ್ಯದಲ್ಲಿ ಕಡಿಮೆಯಾದ ಕೊರೊನಾ ಸೋಂಕು ಪ್ರಕರಣ  * 889 ಜನರಿಗೆ ಹೊಸದಾಗಿ ಸೋಂಕು, 14 ಮಂದಿ ಬಲಿ * ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ

ಬೆಂಗಳೂರು, (ಸೆ.18): ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಕಡಿಮೆಯಾಗಿದ್ದು, ಇಂದು (ಸೆ.18) 889 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶನಿವಾರ ಸೋಂಕಿನಿಂದ  14 ಮಂದಿ ಮೃತಪಟ್ಟಿದ್ದು,889 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇದುವರೆಗೆ 29,13,713 ಜನ ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಒಂದೇ ದಿನ ದಾಖಲೆಯ 28 ಲಕ್ಷ ಮಂದಿಗೆ ಕೋವಿಡ್‌ ಲಸಿಕೆ

ಒಟ್ಟು ಸೋಂಕಿತರ ಸಂಖ್ಯೆ 2,91,3713ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 37,587 ಜನ ಸಾವನ್ನಪ್ಪಿದ್ದಾರೆ.  ಸದ್ಯ 15, 755 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.63 ರಷ್ಟಿದ್ದು, ಮರಣ ಪ್ರಮಾಣ ಶೇ. 1.57 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸೆ.18 263 ಜನರಿಗೆ ಸೋಂಕು ತಗುಲಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 222 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7491 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ
ಬೆಂಗಳೂರಿನಲ್ಲಿ 263 ಹೊಸ ಪ್ರಕರಣಗಳು ಪತ್ತೆಯಾಗಿದ್ದು,222 ಸೋಂಕಿತರು ಗುಣಮುಖರಾಗಿದ್ದಾರೆ. 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ.

ಬಾಗಲಕೋಟೆ 3, ಬೀದರ್ 2, ಚಿಕ್ಕಬಳ್ಳಾಪುರ 0, ಗದಗ 1, ಹಾವೇರಿ 0, ಕಲಬುರ್ಗಿ 4, ಕೊಪ್ಪಳ 0, ರಾಯಚೂರು 1, ರಾಮನಗರ 3, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 263, ದಕ್ಷಿಣಕನ್ನಡ 133, ಹಾಸನ 40, ಕೊಡಗು 45, ಮೈಸೂರು 74, ಉಡುಪಿ 86, ಉತ್ತರಕನ್ನಡ 44 ಹೊಸ ಪ್ರಕರಣ ವರದಿಯಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ