Corona Crisis: 891 ಕೋವಿಡ್‌ ಕೇಸು: 16ರ ಬಾಲಕಿ ಸಾವು

By Govindaraj SFirst Published Jul 13, 2022, 5:00 AM IST
Highlights

ರಾಜ್ಯದಲ್ಲಿ ಮಂಗಳವಾರ 891 ಹೊಸ ಪ್ರಕರಣಗಳು ವರದಿಯಾಗಿದೆ. 1189 ಮಂದಿ ಗುಣಮುಖರಾಗಿದ್ದಾರೆ. ಉತ್ತರ ಕನ್ನಡದಲ್ಲಿ 16 ವರ್ಷದ ಬಾಲಕಿಯೊಬ್ಬಳು ಸೋಂಕಿನಿಂದ ಮೃತಪಟ್ಟಿದ್ದಾಳೆ.

ಬೆಂಗಳೂರು (ಜು.13): ರಾಜ್ಯದಲ್ಲಿ ಮಂಗಳವಾರ 891 ಹೊಸ ಪ್ರಕರಣಗಳು ವರದಿಯಾಗಿದೆ. 1189 ಮಂದಿ ಗುಣಮುಖರಾಗಿದ್ದಾರೆ. ಉತ್ತರ ಕನ್ನಡದಲ್ಲಿ 16 ವರ್ಷದ ಬಾಲಕಿಯೊಬ್ಬಳು ಸೋಂಕಿನಿಂದ ಮೃತಪಟ್ಟಿದ್ದಾಳೆ. ಗುಣಮುಖರ ಹೆಚ್ಚಳದ ಕಾರಣ ಸಕ್ರಿಯ ಪ್ರಕರಣ 6419ಕ್ಕೆ ತಗ್ಗಿದೆ. ಸದ್ಯ ಸಕ್ರಿಯ ಸೋಂಕಿತರ ಪೈಕಿ 89 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದ 6,370 ಮಂದಿ ಮನೆ ಆರೈಕೆಯಲ್ಲಿದ್ದಾರೆ. 

ಈ ನಡುವೆ, ಮೃತ ಬಾಲಕಿಯು ತೀವ್ರ ಜ್ವರ ಹಿನ್ನೆಲೆ ಜುಲೈ 3ಕ್ಕೆ ಖಾಸಗಿ ಆಸ್ಪತ್ರೆ ದಾಖಲಾಗಿದ್ದಳು. ಒಂದು ವಾರದ ನಿರಂತರ ಚಿಕಿತ್ಸೆ ಬಳಿಕವೂ ಚೇತರಿಕೆ ಕಾಣದೇ ಸಾವಿಗೀಡಾಗಿದ್ದಾಳೆ. 20 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.5ರಷ್ಟುದಾಖಲಾಗಿದೆ. ಸೋಮವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 7 ಸಾವಿರ ಹೆಚ್ಚಳವಾಗಿವೆ. ಹೀಗಾಗಿ, ಹೊಸ ಪ್ರಕರಣಗಳು ಸೋಮವಾರಕ್ಕಿಂತ 218 ಏರಿವೆ.

Booster Dose: 3ನೇ ಡೋಸ್‌ ಪಡೆದಿದ್ದು ಬರೀ 15% ಜನ!

ಎಲ್ಲಿ ಎಷ್ಟು ಮಂದಿಗೆ ಸೋಂಕು?: ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 832 ಪತ್ತೆಯಾಗಿವೆ. ಉಳಿದಂತೆ ಮೈಸೂರು 9, ಧಾರವಾಡ 8, ದಕ್ಷಿಣ ಕನ್ನಡ 7, ಶಿವಮೊಗ್ಗ 6, ಬೆಳಗಾವಿ ಮತ್ತು ತುಮಕೂರು ತಲಾ 5, ಉಳಿದಂತೆ 11 ಜಿಲ್ಲೆಗಳಲ್ಲಿ ಐದಕ್ಕಿಂತ ಕಡಿಮೆ, 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ಬೆಂಗಳೂರಿನಲ್ಲಿ832 ಕೊರೋನಾ ಹೊಸ ಪ್ರಕರಣ: ಮಂಗಳವಾರ 832 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.5.08 ರಷ್ಟಿದೆ. 1,101ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 5987 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 58 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7052 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ.

Corona Crisis: ಕೋವಿಡ್‌ ಸೋಂಕು ಪತ್ತೆಯಾದರೆ ಸೀಲ್‌ಡೌನ್‌ ಇಲ್ಲ

670 ಮಂದಿ ಮೊದಲ ಡೋಸ್‌, 2974 ಮಂದಿ ಎರಡನೇ ಡೋಸ್‌ ಮತ್ತು 3408 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 17425 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 13528 ಆರ್‌ಟಿಪಿಸಿಆರ್‌ ಹಾಗೂ 3,897 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್‌ ಪ್ರದೇಶ ಸೃಷ್ಟಿಯಾಗಿಲ್ಲ. ಮಹದೇವಪುರ ವಲಯದಲ್ಲಿ ನಾಲ್ಕು ಪ್ರದೇಶಗಳು ಕಂಟೈನ್ಮೆಂಟ್‌ನಿಂದ ಮುಕ್ತವಾಗಿವೆ. ನಗರದಲ್ಲಿ ಒಟ್ಟು 15 ಕಂಟೈನ್ಮೆಂಟ್‌ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

click me!