9 ಅಸುರಕ್ಷಿತ ಔಷಧಗಳ ಮಾರಾಟ ನಿರ್ಬಂಧ: ಕೇಂದ್ರಕ್ಕೆ ಸಚಿವ ದಿನೇಶ್ ಗುಂಡೂರಾವ್‌ ಪತ್ರ

Published : Feb 23, 2025, 05:36 PM ISTUpdated : Feb 23, 2025, 05:50 PM IST
9 ಅಸುರಕ್ಷಿತ ಔಷಧಗಳ ಮಾರಾಟ ನಿರ್ಬಂಧ: ಕೇಂದ್ರಕ್ಕೆ ಸಚಿವ ದಿನೇಶ್ ಗುಂಡೂರಾವ್‌ ಪತ್ರ

ಸಾರಾಂಶ

ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪೆನಿಗಳ 9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. 

ಬೆಂಗಳೂರು (ಫೆ.23): ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪೆನಿಗಳ 9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. 

9 ಔಷಧಗಳ ವಿವರ: ಫಾರ್ಮಾ ಇಂಪೆಕ್ಸ್‌ ಕಂಪನಿಯ ಮೆಟ್ರೊನಿಡಜೋಲ್‌ ಇಂಜೆಕ್ಷನ್‌ ಐಪಿ-100 ಎಂಎಲ್‌, ಎಲ್ಪಾ ಲ್ಯಾಬೊರೇಟರಿಸ್‌ನ ಡೈಕ್ಲೊಫೆನ್ಯಾಕ್‌ ಸೋಡಿಯಂ ಇಂಜೆಕ್ಷನ್‌ ಐಪಿ, ರುಸೊಮಾ ಲ್ಯಾಬೊರೇಟರಿಸ್‌ನ ಡೆಕ್ಸ್ಟ್‌ರೋಸ್‌ 25% ಡಬ್ಲ್ಯೂ/ವಿ ಡಿ25 ಇಂಜೆಕ್ಷನ್‌ ಐ.ಪಿ., ಐಎಚ್‌ಎಲ್‌ ಲೈಫ್‌ಸೈನ್ಸಸ್‌ನ ಮೆಟ್ರೊನಿಡಜೋಲ್‌ ಇಂಜೆಕ್ಷನ್‌ ಐಪಿ 100 ಎಂಎಲ್‌, ಪಾಕ್ಸನ್ಸ್ ಫಾರ್ಮಾಸಿಟಿಕಲ್ಸ್‌ನ ಫ್ರುಸ್ಮೈಡ್‌ ಇಂಜೆಕ್ಷನ್‌ (ಫ್ರ್ಯೂಕ್ಸ್‌ 10ಎಂಜಿ), ಮಾಡರ್ನ್‌ ಲ್ಯಾಬೊರೇಟರಿಸ್‌ನ ಪೈಪರಾಸಿಲಿನ್‌ ಮತ್ತು ಟಾಜೊಬ್ಯಾಕ್ಟಮ್‌, ರಿಗೈನ್‌ ಲ್ಯಾಬೊರೇಟರಿಸ್‌ನ ಕ್ಯಾಲ್ಸಿಯಂ ಗ್ಲುಕೊನೇಟ್ ಇಂಜೆಕ್ಷನ್‌ ಹಾಗೂ ಒಂಡನ್ಸೆಟ್ರೋನ್‌ ಇಂಜೆಕ್ಷನ್‌ (2ಎಂಎಲ್), ಮಾರ್ಟಿನ್‌ ಮತ್ತು ಬ್ರೌನ್‌ ಬಯೋ ಸೈನ್ಸ್‌ನ ಅಟ್ರೋಪೈನ್‌ ಸಲ್ಫೇಟ್‌ ಇಂಜೆಕ್ಷನ್‌ ಐಪಿ1 ಎಂಎಲ್‌.

ಹೈಕಮಾಂಡ್ ಹೇಳಿಕೆ ಬಗ್ಗೆ ರಾಜಣ್ಣ ಸ್ವಲ್ಪ ಶಿಸ್ತಿನಿಂದ ಇರಲಿ: ಸಚಿವ ದಿನೇಶ್ ಗುಂಡೂರಾವ್

ಜೆ.ಪಿ.ನಡ್ಡಾ ಅವರಿಗೆ ಫೆ.20 ರಂದು ಬರೆದಿರುವ ಪತ್ರದಲ್ಲಿ ವಿವಿಧ ಕಂಪೆನಿಗಳ 9 ಔಷಧಗಳ ವಿವರ, ಬ್ಯಾಚ್‌ ಸಂಖ್ಯೆಯ ವಿವರವನ್ನು ನೀಡಿದ್ದು ಈಗಾಗಲೇ ರಾಜ್ಯದಲ್ಲಿ ಈ ಔಷಧಗಳ ಮಾರಾಟವನ್ನು ನಿರ್ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದೇ ರೀತಿ ಅಮಾಯಕರ ಜೀವಕ್ಕೆ ಕುತ್ತು ತರಬಲ್ಲ ಇಂತಹ ಗುಣಮಟ್ಟ ಇಲ್ಲದ ಔಷಧಗಳ ಮಾರಾಟವನ್ನು ದೇಶದ ಇತರೆ ರಾಜ್ಯಗಳಲ್ಲೂ ನಿರ್ಬಂಧಿಸಬೇಕು ಎಂದು ಕೋರಿದ್ದಾರೆ. ಜ.1ರಿಂದ ಫೆ.16 ರವರೆಗೆ 9 ಔಷಧಗಳನ್ನು ರಾಜ್ಯ ಸರ್ಕಾರವು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಅವು ಬಳಕೆಗೆ ಯೋಗ್ಯವಲ್ಲವೆಂದು ಕಂಡುಬಂದಿದೆ. ಡ್ರಗ್ ಇರುವ ಇಂಜೆಕ್ಷನ್ ಗುಣಮಟ್ಟದ್ದಲ್ಲವೆಂದು ದೃಢಪಟ್ಟಿದೆ.

ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಸೆಂಟ್ರಲ್ ಡ್ರಗ್ಸ್ ಸ್ಯ್ಟಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ (CDSCO) ಪ್ರಯೋಗಾಲಯದಲ್ಲಿ 9 ಔಷಧ ಕಂಪನಿಗಳು ಉತ್ಪಾದಿಸುವ ಡ್ರಗ್​​​ಗಳನ್ನು ಟೆಸ್ಟ್ ಮಾಡಿಸಿ ವರದಿ ಪಡೆಯಬೇಕು. ಅಲ್ಲಿಯವರೆಗೆ ದೇಶಾದ್ಯಂತ ಆ ಔಷಧ ಮಾರಾಟ ನಿರ್ಬಂಧಿಸಬೇಕು. ಜತೆಗೆ ಇದೇ ರೀತಿ ವಿವಿಧ ರಾಜ್ಯಗಳ ನಡುವೆ ಅಲರ್ಟ್‌ ವ್ಯವಸ್ಥೆ ಮಾಡಬೇಕು. ಯಾವುದೇ ರಾಜ್ಯದಲ್ಲಿ ಪರೀಕ್ಷೆ ನಡೆದಾಗ ಗುಣಮಟ್ಟದಲ್ಲಿ ದೋಷ ಇದೆ ಎಂದು ಗೊತ್ತಾದರೆ ಆ ಔಷಧಗಳ ಬಗ್ಗೆ ಬೇರೆ ರಾಜ್ಯಗಳೂ ಅಲರ್ಟ್‌ ಸಂದೇಶ ಕಳುಹಿಸಬೇಕು. ಜೀವಕ್ಕೆ ಹಾನಿಕಾರಕ ಮತ್ತು ಅಸುರಕ್ಷಿತ ಔಷಧಗಳ ಬಗ್ಗೆ ರಾಜ್ಯ ಸರ್ಕಾರ, ವೈದ್ಯರು, ಫಾರ್ಮಾಸಿಸ್ಟ್​​​ಗಳು ಹಾಗೂ ರೋಗಿಗಳಿಗೆ ಎಚ್ಚರಿಕೆ 'ಅಲರ್ಟ್' ಮಾಹಿತಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

ಆಸೆಗಳಿದ್ರೇನೆ ಎಲ್ಲರೂ ರಾಜಕೀಯಕ್ಕೆ ಬರೋದು, ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಸಚಿವ ದಿನೇಶ್ ಗುಂಡೂರಾವ್

ಕರ್ನಾಟಕದಲ್ಲಿ ಮಾರಾಟಕ್ಕೆ ತಡೆ: ಈ ಹಿಂದೆ ಪಶ್ಚಿಮ ಬಂಗಾಳ ಮೂಲದ ಪಶ್ಚಿಮ ಬಾಂಗಾ ಫಾರ್ಮಾಸಿಟಿಕಲ್ಸ್ ತಯಾರಿಸಿದ ಇಂಜೆಕ್ಷನ್ ನೀಡಿದ ಪರಿಣಾಮ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಐವರು ಗರ್ಭಿಣಿಯರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ನಡೆಸಿದ ಪರೀಕ್ಷೆಯಲ್ಲಿ 9 ಔಷಧ ಕಂಪನಿಗಳ ಔಷಧಿಗಳಲ್ಲಿ ಲೋಪ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮಾರಾಟ ಮಾಡುವುದನ್ನು ತಡೆಯುವಂತೆಯೂ ಸೂಚನೆ ನೀಡಲಾಗಿದೆ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌