ಕಳೆದ 24 ಗಂಟಗಳಲ್ಲಿ ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಅಬ್ಬರಿಸಿ ಬೊಬ್ಬಿರಿದಿದೆ. ಹಾಗಾದ್ರೆ ಮಂಗಳವಾರ ರಾಜ್ಯದಲ್ಲಿ ಎಷ್ಟು ಕೊರೋನಾ ಕೇಸ್? ಎಷ್ಟು ಸಾವು? ಎನ್ನುವ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಆ. 01): ರಾಜ್ಯದಲ್ಲಿ ಇಂದು (ಮಂಗಳವಾರ) 9058 ಕೊರೋನಾ ಕೇಸ್ ಪತ್ತೆಯಾಗಿದ್ದು, 135 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 5159 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2,54,626 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
undefined
ಪ್ರಪಂಚದ ವಿವಿಧ ದೇಶಗಳಲ್ಲಿ ಕೊರೋನಾ ಅಬ್ಬರ ಹೇಗಿದೆ?
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,51,481 ಕ್ಕೆ ಏರಿಕೆಯಾಗಿದ್ದು, 5837 ಜನ ಸಾವನ್ನಪ್ಪಿದ್ದಾರೆ. ಇನ್ನು ಪ್ರಸ್ತುತ 90999 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಕೇಸ್ ಸಂಖ್ಯೆ
ಬೆಂಗಳೂರಿನಲ್ಲಿ ಮಂಗಳವಾರ 2967 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 132092 ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 1137 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲ ಇದುವರೆಗೆ ಒಟ್ಟು 91180 ಜನರು ಗುಣಮುಖರಾಗಿದ್ದಾರೆ. ಸದ್ಯ 38906 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಕೇಸ್ ಸಂಖ್ಯೆ