ರಾಜ್ಯದಲ್ಲಿ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಮತ್ತೆ ಒಂದು ಸಾವಿರಕ್ಕಿಂತ ಕಡಿಮೆ ವರದಿಯಾಗಿವೆ. ಶನಿವಾರ 941 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 788 ಮಂದಿ ಗುಣಮುಖರಾಗಿದ್ದಾರೆ.
ಬೆಂಗಳೂರು (ಸೆ.04): ರಾಜ್ಯದಲ್ಲಿ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಮತ್ತೆ ಒಂದು ಸಾವಿರಕ್ಕಿಂತ ಕಡಿಮೆ ವರದಿಯಾಗಿವೆ. ಶನಿವಾರ 941 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 788 ಮಂದಿ ಗುಣಮುಖರಾಗಿದ್ದಾರೆ. ಚಾಮರಾಜನಗರದಲ್ಲಿ 83 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 23 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.4ರಷ್ಟುದಾಖಲಾಗಿದೆ. ಶುಕ್ರವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆ ಎರಡು ಸಾವಿರ ಹೆಚ್ಚು ನಡೆಸಲಾಗಿದೆ. ಆದರೂ, ಹೊಸ ಪ್ರಕರಣಗಳು 164 ಇಳಿಕೆಯಾಗಿವೆ (ಶುಕ್ರವಾರ 1,105 ಪ್ರಕರಣಗಳು, ಸಾವು ಒಂದು).
ಆಗಸ್ಟ್ ಕೊನೆಯ ವಾರ 500 ಆಸುಪಾಸಿಗೆ ತಗ್ಗಿದ್ದ ಹೊಸ ಪ್ರಕರಣಗಳು ಐದು ದಿನಗಳ ಬಳಿಕ ಶುಕ್ರವಾರ ಒಂದು ಸಾವಿರಕ್ಕೆ ಹೆಚ್ಚಿದ್ದವು. ಸದ್ಯ ಮತ್ತೆ ಒಂದು ಸಾವಿರಕ್ಕಿಂತ ಕಡಿಮೆಯಾಗಿವೆ. ಸಕ್ರಿಯ ಸೋಂಕಿತರ ಸಂಖ್ಯೆ 5,203 ಇದ್ದು, ಈ ಪೈಕಿ 43 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5 ಮಂದಿ ಐಸಿಯು, 5 ಮಂದಿ ಆಕ್ಸಿಜನ್, 33 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 5,160 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.
undefined
Artificial Coronavirus: ಐಐಎಸ್‌ಸಿಯಲ್ಲಿ ಕೃತಕ ಕೊರೋನಾ ವೈರಸ್ ಸೃಷ್ಟಿ..!
ಬೆಂಗಳೂರಿನಲ್ಲಿ 526 ಮಂದಿಯಲ್ಲಿ ಕೊರೋನಾ ಪತ್ತೆ: ಶನಿವಾರ 526 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.3.89 ದಾಖಲಾಗಿದೆ. 454 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 3522 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 50 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, 12 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟು 3809 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 147 ಮಂದಿ ಮೊದಲ ಡೋಸ್, 558 ಮಂದಿ ಎರಡನೇ ಡೋಸ್ ಮತ್ತು 3104 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 13837 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 11073 ಆರ್‌ಟಿಪಿಸಿಆರ್ ಹಾಗೂ 2764 ಮಂದಿಗೆ ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ. ನಗರದಲ್ಲಿ 9 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
13 ಮಂದಿಗೆ ಕೋವಿಡ್: ಉಡುಪಿ ಜಿಲ್ಲೆಯಲ್ಲಿ ಶನಿವಾರ 590 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ 8, ಕಾರ್ಕಳ ತಾಲೂಕಿನ 4 ಮಂದಿ ಮತ್ತು ಹೊರ ಜಿಲ್ಲೆಯ ಒಬ್ಬರು ಸೇರಿ ಒಟ್ಟು 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈದಿನ 11 ಮಂದಿ ಸೋಂಕಿತರು ಗುಣಮುಖರಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 56 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 541 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
Corona Crisis: ಎರಡು ವಾರದ ಬಳಿಕ ಕರ್ನಾಟಕದಲ್ಲಿ ಕೊರೋನಾ ಸಾವು ಶೂನ್ಯ
ಎಲ್ಲಿ, ಎಷ್ಟು ಪ್ರಕರಣಗಳು?: ಶನಿವಾರ ಬೆಂಗಳೂರಿನಲ್ಲಿ 526 ಪ್ರಕರಣ ಪತ್ತೆಯಾಗಿವೆ. ಉಳಿದಂತೆ ಮೈಸೂರಿನಲ್ಲಿ 99, ಹಾಸನ 36, ರಾಮನಗರ 35, ದಕ್ಷಿಣ ಕನ್ನಡ 29, ಚಾಮರಾಜನಗರ ಮತ್ತು ಶಿವಮೊಗ್ಗ ತಲಾ 24 ಮಂದಿಗೆ ಸೋಂಕು ತಗುಲಿದೆ. 10 ಜಿಲ್ಲೆಗಳಲ್ಲಿ ಬೆರಳೆಣಿಕೆ, ಬೀದರ್, ಯಾದಗಿರಿ ಹಾಗೂ ಗದಗದಲ್ಲಿ ಶೂನ್ಯ ಪ್ರಕರಣ ವರದಿಯಾಗಿವೆ.