
ಬೆಂಗಳೂರು, (ಡಿ.07): ರಾಜ್ಯದಲ್ಲಿ ಇಂದು (ಸೋಮವಾರ) ಹೊಸದಾಗಿ ಕೇವಲ 998 ಕೊರೋನಾ ಪಾಸಿಟಿವ್ ಪ್ರಕರಳುಗಳು ದೃಢಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,94,004ಕ್ಕೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ 11 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ 11,867 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 8,57,351 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 24,767 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
ಕೊರೋನಾ ಲಸಿಕೆಗೆ ಕಾಯುತ್ತಿರುವವರಿಗೆ ಬಿಗ್ ಶಾಕ್ ನೀಡಿದ WHO!
ಇನ್ನೂ ಕಳೆದ 24 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 501 ಜನರಿಗೆ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,74,525 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು 7 ಜನ ಸೋಂಕಿತರು ಬಲಿಯಾಗಿದ್ದು, ಇದುವರೆಗೆ 4190 ಜನ ಮೃತಪಟ್ಟಿದ್ದಾರೆ.
3,51,065 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಂತ ಮತ್ತು 19,269 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದಿನ (ಸೋಮವಾರ) ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ