ಕರ್ನಾಟಕದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆ: ಎಚ್ಚರವಾಗಿರಿ..!

Published : Mar 09, 2020, 08:38 PM ISTUpdated : Mar 09, 2020, 09:25 PM IST
ಕರ್ನಾಟಕದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆ: ಎಚ್ಚರವಾಗಿರಿ..!

ಸಾರಾಂಶ

ಕರ್ನಾಟಕದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆಯಾಗಿದೆ. ಈ ಬಗ್ಗೆ ರಾಜ್ಯ ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಖಚಿತಪಡಿಸಿದ್ದಾರೆ. ಯಾರು? ಎಲ್ಲಿ?

ಬೆಂಗಳೂರು, [ಮಾ.09]: ಇಷ್ಟು ದಿನ ಬೇರೆ ರಾಷ್ಟ್ರ, ಬೇರೆ ರಾಜ್ಯಗಳಲ್ಲಿ ಪ್ರತ್ಯಕ್ಷ್ಯವಾಗಿದ್ದ ಡೆಡ್ಲಿ ಕೊರೋನಾ ವೈರಸ್ ಕರ್ನಾಟಕಕ್ಕೂ ಎಂಟ್ರಿ ಕೊಟ್ಟಿದೆ. ಇತ್ತೀಚೆಗಷ್ಟೇ ಅಮೆರಿಕಕ್ಕೆ ಹೋಗಿ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. 

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ವ್ಯಕ್ತಿ,  ಕುಟುಂಬ ಸಮೇತರಾಗಿ ಮಾರ್ಚ್ 1ರಂದು ಬೆಂಗಳೂರಿಗೆ ಬಂದಿದ್ದರು. ಸದ್ಯ ಆ ವ್ಯಕ್ತಿಯನ್ನ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗ್ತಿದೆ.

Breaking: ಕೊರೋನಾ ಭೀತಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಇನ್ನು ಆತನ ಜತೆಗೆ ಬಂದಿದ್ದ ಪತ್ನಿ ಮತ್ತು ಅವರ ಮಗಳನ್ನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗೊಳಪಡಿಸಲಾಗಿದೆ. ಅಷ್ಟೇ ಅಲ್ಲದೇ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನ  ಸಹ ಪರೀಕ್ಷೆ ಒಳಪಡಿಸಲಾಗಿದೆ. ಈ ಬಗ್ಗೆ ವೈದ್ಯಕೀಯ ಸಚಿವ ಶಿಕ್ಷಣ ಸಚಿವ ಡಾ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟವರು 700 ಜನರ ಪೈಕಿ ಒಬ್ಬರಿಗೆ ಕೊರೋನಾ ಇರುವುದು ದೃಡಪಟ್ಟಿದೆ ಎಂದು ಸ್ಪಷ್ಟಪಡಿಸಿದರು.

ಇಲ್ಲಿಯತನಕ 982 ಜನರನ್ನ ನಿಗಾ ಇಡಲಾಗಿದೆ. ಇವತ್ತು 92 ಜನರ ಮೇಲೆ ನಿಗಾ ಇಟ್ಟಿದ್ದು, 28 ದಿನ ನಿಗಾ ಇಡಲಾಗಿದ್ದವರಲ್ಲಿ 8 ಜನರನ್ನ ಮನೆಗೆ ಕಳುಹಿಸಲಾಗಿದೆ‌ ಎಂದು ಹೇಳಿದರು.

News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್