ನಲ್ವತ್ತು ವರ್ಷಗಳಿಂದ ಉಳುಮೆ ಮಾಡಿದ್ದೇವೆ. ಅಕ್ರಮ ಸಕ್ರಮ ಯೋಜನೆಯಡಿ ನಮಗೆ ಸಾಗುವಳಿ ಚೀಟಿ ನೀಡದೇ ಒಕ್ಕಲೆಬ್ಬಿಸುತ್ತಿದ್ದಾರೆಂದು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಕಟ್ಟಿ ಗ್ರಾಮದಲ್ಲಿ ನಡೆದಿದೆ.
ಹಾವೇರಿ (ಸೆ.4): ನಲ್ವತ್ತು ವರ್ಷಗಳಿಂದ ಉಳುಮೆ ಮಾಡಿದ್ದೇವೆ. ಅಕ್ರಮ ಸಕ್ರಮ ಯೋಜನೆಯಡಿ ನಮಗೆ ಸಾಗುವಳಿ ಚೀಟಿ ನೀಡದೇ ಒಕ್ಕಲೆಬ್ಬಿಸುತ್ತಿದ್ದಾರೆಂದು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಕಟ್ಟಿ ಗ್ರಾಮದಲ್ಲಿ ನಡೆದಿದೆ.
ಈರಣ್ಣ ಲಮಾಣಿ( 38 ) ಆತ್ಮಹತ್ಯೆಗೆ ಯತ್ನಿಸಿದ ರೈತ. ವಿಷ ಸೇವಿಸಿ ಅಸ್ವಸ್ಥರಾದ ಕೂಡಲೇ ಶಿಗ್ಗಾವಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಗೃಹ ಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ!
ಸುಮಾರು 40 ವರ್ಷಗಳಿಂದ ನೀರಲಕಟ್ಟೆ ಗ್ರಾಮದ ಸರ್ವೆ ನಂಬರ್ 53 ರರ ಜಮೀನು ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತ. ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ನೀಡುವಂತೆ ಕಂದಾಯ ಇಲಾಖೆಗೆ ಮನವಿ ಮಾಡಿದ್ದ ರೈತರು. ನಮ್ಮನ್ನು ಒಕ್ಕಲೆಬ್ಬಿಸೋ ಪ್ರಯತ್ನ ಮಾಡ್ತಾ ಇದಾರೆಂದು ಕೆಲ ದಿನಗಳ ಹಿಂದೆ ಈರಣ್ಣ ಸೇರಿ ರೈತರು ಪ್ರತಿಭಟನೆ ನಡೆಸಿದ್ದರು.
ಇಂದು ಇಂದು ಕಂದಾಯ ಇಲಾಖೆ ಅಧಿಕಾರಿಗಳು ನೀರಲಕಟ್ಟೆಗೆ ಬಂದಾಗ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕಿದ್ದ ರೈತ ಈರಣ್ಣ, ಗ್ರಾಮಸ್ಥರು ಈ ವೇಳೆ ಅಧಿಕಾರಿಗಳ ವಿರುದ್ಧ ಆಕ್ರೋಶ ಆಕ್ರೋಶಗೊಳ್ಳುತ್ತಲೇ ವಿಷ ಸೇವಿಸಿದ ರೈತ. ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ವಿಷ ಸೇವಿಸಿದ ಈರಣ್ಣ ಲಮಾಣಿ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಬಂದಿದೆ.