
ಕಲಬುರಗಿ (ಫೆ.6): ಏ ಯಾರಲ್ಲಿ ಟಿಕೆಟ್... ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೋರ್ವಳು ಸಾರಿಗೆ ಇಲಾಖೆಯ ಬಸ್‌ನಲ್ಲಿ ಕಂಡಕ್ಟರ್ ಆಗಿ ಪ್ರಯಾಣಿಕರಿಗೆ ಟಿಕೆಟ್ ನೀಡುವ ಮೂಲಕ ಭಾರೀ ಸುದ್ದಿಯಾಗಿದ್ದಾಳೆ.
ಹೌದು ಘತ್ತರಗಾ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ವಿದ್ಯಾ ಎಂಬ ಬಾಲಕಿ ಸಾರಿಗೆ ಇಲಾಖೆಯಲ್ಲಿ ಬಸ್ ಕಂಡಕ್ಟರ್ ಆಗಿ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕೆಎಸ್‌ಆರ್‌ಟಿಸಿ ಉದ್ಯೋಗ: ಎಂಟು ವರ್ಷಗಳಲ್ಲಿ 13,888 ನೌಕರರ ನಿವೃತ್ತಿ, ಕೇವಲ 262 ನೇಮಕಾತಿ
ವಿದ್ಯಾಗೆ ಕಂಡಕ್ಟರ್ ಆಗುವ ಕನಸು:
ಎಲ್ಲರಿಗೂ ಜೀವನದಲ್ಲಿ ಏನೇನು ಆಗಬೇಕು ಕನಸುಗಳಿರುತ್ತವೆ. ಪೊಲೀಸ್, ಜಿಲ್ಲಾಧಿಕಾರಿ ಹೀಗೆ ಒಂದೊಂದು ಕನಸು ಕಟ್ಟಿಕೊಂಡಿರುತ್ತಾರೆ. ಹಾಗೆಯೇ ವಿದ್ಯಾರ್ಥಿನಿ ವಿದ್ಯಾಗೆ ಒಂದು ಭವಿಷ್ಯದಲ್ಲಿ ಸಾರಿಗೆ ಇಲಾಖೆಯಲ್ಲಿ ಬಸ್ ಕಂಡಕ್ಟರ್ ಆಗುವ ಕನಸು ಕಟ್ಟಿಕೊಂಡಿದ್ದಾಳೆ. ಅಷ್ಟಕ್ಕೆ ಸುಮ್ಮನಾಗಿಲ್ಲ. ಅದನ್ನು ಸಾರಿಗೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾಳೆ. ವಿದ್ಯಾರ್ಥಿನಿಯ ಕನಸಿಗೆ ಸ್ಪಂದಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು ಟಿಕೆಟ್ ವಿತರಣೆಯ ತರಬೇತಿ ನೀಡಿದ್ದಾರೆ.
ವಿಜಯಪುರ: ಅಚಾಚ್ಯ ಶಬ್ದದಿಂದ ನಿಂದಿಸಿದ ಪ್ರಯಾಣಿಕನಿಗೆ ಮಹಿಳಾ ಕಂಡಕ್ಟರ್ ಚಪ್ಪಲಿ ಸೇವೆ
ಅಫ್ಜಲಪುರ ಪಟ್ಟಣದಿಂದ ಘತ್ತರಗಾ ಗ್ರಾಮ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್‌ನಲ್ಲಿ ಟಿಕೆಟ್ ವಿತರಣೆ ಮಾಡಿರುವ ವಿದ್ಯಾರ್ಥಿನಿ. ಟಿಕೆಟ್ ವಿತರಣೆ ಮಾಡುವ ಬಗ್ಗೆ ವಿದ್ಯಾರ್ಥಿನಿಗೆ ತಿಳಿಸಿಕೊಡುತ್ತಿರುವ ಸಾರಿಗೆ ಇಲಾಖೆ ಅಧಿಕಾರಿ. ಅಧಿಕಾರಿಗಳು ತರಬೇತಿ ನೀಡಿದಂತೆ ಬಸ್‌ನಲ್ಲಿ ಪ್ರಯಾಣಿಕರಿಗೆ ಶಕ್ತಿ ಯೋಜನೆ ಹಾಗೂ ಸಾಮಾನ್ಯ ಟಿಕೆಟ್ ವಿತರಿಸಿದ ವಿದ್ಯಾರ್ಥಿನಿ. ವಿದ್ಯಾರ್ಥಿನಿಯೋರ್ವಳು ಬಸ್ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸಿದ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಎಲ್ಲೆಡೆ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ