
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು
ಚಿಕ್ಕಮಗಳೂರು (ಆ.29) : ಪತ್ನಿ ಪತಿ ಜೊತೆ ಜಗಳವಾಡಿ ತವರು ಮನೆಗೆ ಹೋಗಿದ್ದಕ್ಕೆ ಪತಿ ಪತ್ನಿಯ ತವರು ಮನೆಗೆ ಮಾಟ ಮಾಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮ(Mattikatte village)ದ ಸತೀಶ್ ಎಂಬುವರು ತನ್ನ ತಂಗಿ ಸುಮಿತ್ರರನ್ನ 12 ವರ್ಷಗಳ ಹಿಂದೆ ಮರಸಣಿಗೆ ಗ್ರಾಮದ ಗುರುಮೂರ್ತಿ ಎಂಬುವರಿಗೆ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದಗಿನಿಂದಲೂ ಗಂಡ ಹೆಂಡತಿ ಮಧ್ಯೆ ಆಗಾಗ ಜಗಳ ನಡೆಯುತ್ತಲೇ ಇತ್ತು. ದೊಡ್ಡವರು ರಾಜಿ-ಪಂಚಾಯತಿ ಮಾಡುತ್ತಲೇ ಇದ್ದರು. ಕಳೆದ ಒಂದು ತಿಂಗಳ ಹಿಂದೆ ಗಂಡ ಹೆಂಡತಿ ಮಧ್ಯೆ ಮತ್ತೆ ಜಗಳವಾದ ಕಾರಣ ಸುಮಿತ್ರ ಅಣ್ಣನ ಮನೆ ಸೇರಿದ್ದಳು.
'ಮಾಟಗಾತಿಯ ಕಾಡಿನಲ್ಲಿ ರೇಣುಕಾ ಯಲ್ಲಮ್ಮ' ವೀಕ್ಷಿಸಿ ಸ್ಟಾರ್ ಸುವರ್ಣದಲ್ಲಿ
ಇದರಿಂದ ಕೋಪಗೊಂಡ ಪತಿ ಗುರುಮೂರ್ತಿ ಬೆಳಗಿನ ಜಾವ 4 ಗಂಟೆಗೆ ಸುಮಿತ್ರ ಅವರ ಅಣ್ಣ ಸತೀಶ್ ಮನೆಗೆ ಬಂದು ನನ್ನ ಹೆಂಡತಿಯನ್ನು ಕರೆದುಕೊಂಡು ಬಂದಿದ್ದೀಯಾ. ನಿನ್ನನ್ನು ಬಿಡುವುದಿಲ್ಲ ಎಂದು ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದನು. ಸತೀಶ್ ಕಿಟಕಿ ತೆಗೆದು ನೋಡಿದಾಗ ಗುರುಮೂರ್ತಿಯ ಕೂಗಾಟ ಕಾಣಿಸುತ್ತಿತ್ತು. ಕೂಡಲೇ ಸತೀಶ್ ಬಾಗಿಲು ತೆಗೆದು ಹೊರ ಬಂದಾಗ ಗುರುಮೂರ್ತಿ ಅಲ್ಲಿಂದ ಹೋಗಿದ್ದನು.
ನಿಮ್ಮ ಮನೆ ಮೇಲೆ ಯಾರಾದ್ರೂ ಬ್ಲ್ಯಾಕ್ ಮ್ಯಾಜಿಕ್ ಮಾಡಿದ್ದಾರಾ? ಹೀಗೆ ಚೆಕ್ ಮಾಡಿ
ಮತ್ತೆ ಬೆಳಗಿನ ಜಾವ 6 ಗಂಟೆಗೆ ಮನೆಯಿಂದ ಹೊರ ಬಂದಾಗ ಮನೆ ಮುಂದೆ ಯಾವುದೋ ಪ್ರಾಣಿಯ ರಕ್ತಚೆಲ್ಲಿ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ಗುರುಮೂರ್ತಿ ತೋರಿಸಿದ್ದ ಚಾಕುವನ್ನೂ ಅಲ್ಲೆ ಬಿಸಾಡಿ ಹೋಗಿದ್ದನು. ಮನೆಗೆ ವಾಮಾಚಾರ ಮಾಡಿಸಿ, ಕೊಲೆ ಬೆದರಿಕೆ ಹಾಕಿರುವ ತಂಗಿಯ ಗಂಡ ಗುರುಮೂರ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸತೀಶ್ ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ದೂರನ್ನ ಸ್ವೀಕರಿಸಿಕೊಂಡ ಬಣಕಲ್ ಪೊಲೀಸರು ಆರೋಪಿ ಗುರುಮೂರ್ತಿಯನ್ನ ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ