Latest Videos

Shivamogga: 40 ಅಡಿ ಆಳದ ಕಂದಕಕ್ಕೆ ಉರುಳಿದ ಸರ್ಕಾರಿ ಬಸ್: ತಪ್ಪಿದ ಭಾರಿ ಅನಾಹುತ

By Govindaraj SFirst Published Jul 1, 2024, 10:56 PM IST
Highlights

ಎದುರಿನಿಂದ ಬಂದ ವಾಹನಕ್ಕೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್  40 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಮಗೋಡು ಎಂಬಲ್ಲಿ ನಡೆದಿದೆ. 

ಶಿವಮೊಗ್ಗ (ಜು.01): ಎದುರಿನಿಂದ ಬಂದ ವಾಹನಕ್ಕೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್  40 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಮಗೋಡು ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಹೊಸನಗರ ಮಾರ್ಗವಾಗಿ ಭಟ್ಕಳಕ್ಕೆ ಬಸ್ ತೆರಳುತ್ತಿತ್ತು. 

ಈ ವೇಳೆ ಎದುರಿಗೆ ಬಂದಂತ ಬೈಕ್‌ಗೆ ಸೈಡ್ ಕೊಡಲು ಹೋಗಿ 40 ಅಡಿ ಆಳದ ಕಂದಕಕ್ಕೆ ಬಸ್ ಉರುಳಿದೆ. ಮರ ತಡೆಯದಿದ್ದರೆ ಇನ್ನೂ 100 ಅಡಿ ಆಳದ ಒಳಗೆ ಬೀಳುತ್ತಿತ್ತು. ಬಸ್‌ನಲ್ಲಿ ಮಹಿಳೆಯರು ಮಕ್ಕಳು ಸೇರಿ, 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಪ್ರಯಾಣಿಕರ ಸಹಾಯಕ್ಕೆ ಧಾವಿಸಿದ್ದಾರೆ.

ಟೆಂಪೋ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು: ಗುಡಿಬಂಡೆ-ಪೇರೆಸಂದ್ರ ಮಾರ್ಗದ ಕಮ್ಮಗುಟ್ಟಹಳ್ಳಿ ಕ್ರಾಸ್ ನಲ್ಲಿ ಗಣಿಗಾರಿಕೆಗೆ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಟೆಂಪೋ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಾಹನ ಚಾಲಕ ಪರಾರಿಯಾಗಿದ್ದಾನೆ. ಮೃತನನ್ನು ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ನಾಗೇಶ್ (21) ಎಂದು ಗುರ್ತಿಸಲಾಗಿದೆ. ಸ್ಥಳಕ್ಕೆ ಆ್ಯಂಬುಲೆನ್ಸ್‌ ಬಾರದ ಕಾರಣ ಬೊಲೆರೋ ವಾಹನದಲ್ಲಿ ಮೃತ ದೇಹವನ್ನು ಸಾಗಿಸಲಾಯಿತು. 

ಸ್ಯಾಂಡಲ್‌ವುಡ್‌ನ ಈ ಹಾಸ್ಯ ನಟ ಬಂಧನ ಮೂವಿ ನೋಡಿ ವಿಷ್ಣು ಫ್ಯಾನ್‌ ಆದ್ರು: ಕಟೌಟ್ ಏರಿ ಕ್ಷೀರಾಭಿಷೇಕ ಮಾಡಿದ್ರು..

ಈ ಕುರಿತು ಸಾರ್ವಜನಿಕ ಆಸ್ಪತ್ರೆಯ ವಿರುದ್ಧ ತೀವ್ರ ಆಕ್ರೋಷ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೇರೆಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಆ್ಯಂಬುಲೆನ್ಸ್‌ಗಳಲ್ಲಿ ರೋಗಿಗಳನ್ನು ಕರೆತರಲು ಅವಕಾಶವಿದೆ. ಶವಗಳನ್ನು ಸಾಗಿಸಲು ಅವಕಾಶವಿಲ್ಲ. ಅದಕ್ಕಾಗಿ ಪಂಚಾಯತಿ ಮಟ್ಟದಲ್ಲಿ ಶವ ಸಾಗಿಸುವ ವಾಹನವನ್ನು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

click me!