ಚಂದ್ರಯಾನ 3 ಯಶಸ್ಸಿಗೆ ಪ್ರಾರ್ಥಿಸಿ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ

Published : Aug 22, 2023, 06:51 AM IST
ಚಂದ್ರಯಾನ 3 ಯಶಸ್ಸಿಗೆ ಪ್ರಾರ್ಥಿಸಿ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ

ಸಾರಾಂಶ

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿತು. ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು.

ಸುಬ್ರಹ್ಮಣ್ಯ (ಆ.22) :  ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿತು. ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು.

ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 (Chandrayana 3) ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ ಹೆಸರು ಪ್ರಪಂಚದಲ್ಲೆ ಅಗ್ರಗಣ್ಯವಾಗಲಿ ಎಂದು ಕುಕ್ಕೆ ಸುಬ್ರಹ್ಮಣ್ಯನಿಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನೇತೃತ್ವದಲ್ಲಿ ದೇವಳದ ಆಡಳಿತ ಮಂಡಳಿ, ಊರ ಹಿರಿಯರು ಮತ್ತು ಸಾರ್ವಜನಿಕ ಭಕ್ತರು ಪ್ರಾರ್ಥನೆ ಸಲ್ಲಿಸಿದರು. ಇಸ್ರೋ ಸಂಸ್ಥೆಯ ಪರವಾಗಿ ನಾಗರಾಜನಿಗೆ ಹಾಲು ಅರ್ಪಿಸಿದರು.

23ರ ಬದಲು 27ಕ್ಕೆ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್, ಚಂದ್ರಯಾನ3 ದಿನಾಂಕ ಬದಲಿಸಿತಾ ಇಸ್ರೋ?

ದೇವಳದ ಆಡಳಿತ ಮಹಾಪೂಜೆ ಮತ್ತು ನಾಗ ತಂಬಿಲ (ಕಾರ್ತಿಕ ಪೂಜೆ) ಸೇವೆ ಸಮರ್ಪಿಸಿ ಚಂದ್ರಯಾನ 3 ಯಶಸ್ಸಿಗೆ ದೇವಳದ ಆಡಳಿತ ಮಂಡಳಿ ಮತ್ತು ಊರ ಹಿರಿಯರು, ಭಕ್ತರು ಪ್ರಾರ್ಥಿಸಿದರು.

ದೇವಳದ ಆಡಳಿತ ಮಂಡಳಿಯಿಂದ ಇಸ್ರೋ ಹೆಸರಿನಲ್ಲಿ ದೇವರಿಗೆ ಪ್ರಾರ್ಥನೆಯೊಂದಿಗೆ ಸೇವೆ ನೆರವೇರಿಸಲಾಗಿದೆ. ವಿಶೇಷವಾಗಿ ಪ್ರಾರ್ಥಿಸಲಾಗಿದೆ ಎಂದು ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್‌ ಸುಳ್ಳಿ ಹೇಳಿದರು.

ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್‌ ಪ್ರಸಾದ್‌, ಮನೋಹರ ರೈ, ಲೋಕೇಶ್‌ ಮುಂಡುಕಜೆ, ವನಜಾ ವಿ.ಭಟ್‌, ಶೋಭಾ ಗಿರಿಧರ್‌, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್‌ ಮತ್ತಿತರರಿದ್ದರು.

Chandrayaan- 3: ಇಸ್ರೋ ಮಾಜಿ ಮುಖ್ಯಸ್ಥರಿಗೆ ಪ್ರಕಾಶ್‌ ರೈ ಲೇವಡಿ: ತುಂಬಾ ಕೆಳಮಟ್ಟಕ್ಕೆ ಇಳಿದಿದ್ದೀರಾ ಎಂದು ನೆಟ್ಟಿಗರ ಟೀಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!