ಉಡುಪಿ: ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

By Kannadaprabha News  |  First Published Jul 9, 2023, 12:38 PM IST

ಕಡಲ್ಕೊರೆತ ತಡೆಗೆ ಹಿಂದಿನ ಸರ್ಕಾರದವರು ಏನು ಮಾಡಿದ್ದಾರೆ ಎಂದು ಕೆದಕುವುದಕ್ಕೆ ಹೋಗುವುದಿಲ್ಲ, ಆರೋಪವನ್ನೂ ಮಾಡುವುದಿಲ್ಲ. ಆದರೆ ಕಡಲು ಕೊರೆತ ತಡೆಗೆ ನನ್ನ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡುತ್ತೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.


ಪಡುಬಿದ್ರಿ (ಜು.9) : ಕಡಲ್ಕೊರೆತ ತಡೆಗೆ ಹಿಂದಿನ ಸರ್ಕಾರದವರು ಏನು ಮಾಡಿದ್ದಾರೆ ಎಂದು ಕೆದಕುವುದಕ್ಕೆ ಹೋಗುವುದಿಲ್ಲ, ಆರೋಪವನ್ನೂ ಮಾಡುವುದಿಲ್ಲ. ಆದರೆ ಕಡಲು ಕೊರೆತ ತಡೆಗೆ ನನ್ನ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡುತ್ತೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ್‌(Lakshmi hebbalkar) ಭರವಸೆ ನೀಡಿದ್ದಾರೆ.

ಅವರು ಶುಕ್ರವಾರ ಇಲ್ಲಿನ ಕಾಡಿಪಟ್ಣ ಪ್ರದೇಶದಲ್ಲಿ ಸಂಭವಿಸುತ್ತಿರುವ ಕಡಲುಕೊರೆತವನ್ನು ವೀಕ್ಷಿಸಿ ಮಾತನಾಡಿದರು.

Tap to resize

Latest Videos

undefined

ಕಡಲುಕೊರೆತ ಈ ಒಂದು ವರ್ಷದ ಸಮಸ್ಯೆಯಲ್ಲ, ಪ್ರತಿವರ್ಷ ಇದು ಸಂಭವಿಸುತ್ತಿದೆ. ಇದನ್ನು ತಡೆಯಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳೆರಡರ ಸಹಭಾಗಿತ್ವ ಬೇಕು, ಈ ಬಗ್ಗೆ ಪ್ರಯತ್ನ ಮಾಡುತ್ತೇನೆ ಎಂದರು.

 

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಕೊಡಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆ ತಡವಾಗಿ ಆರಂಭಗೊಂಡಿದ್ದರೂ ಸಹ ಮಳೆಯಿಂದ ಈಗಾಗಲೇ 7 ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಈಗಾಗಲೇ ತಲಾ 5 ಲಕ್ಷ ರು. ಪರಿಹಾರ ವಿತರಿಸಲಾಗಿದೆ. ಪ್ರಾಕೃತಿಕ ವಿಕೋಪದಿಂದ ಸತ್ತವರ ಮನೆಯವರಿಗೆ 24 ಗಂಟೆಯೊಳಗೆ ಪರಿಹಾರ ನೀಡಲಾಗುತ್ತದೆ ಎಂದರು.

ಅಲ್ಲದೇ ಮುಂದೆ ಜಿಲ್ಲೆಯಲ್ಲಿ ಮಳೆಯಿಂದ ಜೀವಹಾನಿಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಬೈಂದೂರು ಭಾಗದಲ್ಲಿ ಕಾಲು ಸಂಕದಿಂದ ಜಾರಿ ನದಿಗೆ ಬಿದ್ದು ಮೃತಪಟ್ಟವರ ಬಗ್ಗೆ ಕೇಳಲಾದ ಪ್ರಶ್ನೆಗೆ, ಕಾಲು ಸಂಕ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಕೇಳಿ ತಿಳಿದುಕೊಳ್ಳುತ್ತೇನೆ ಎಂದರು.

ಈ ಸಂದರ್ಭ ಕಾಪು ಶಾಸಕ ಸುರೇಶ್‌ ಶೆಟ್ಟಿಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ., ಜಿ.ಪಂ. ಸಿಇಒ ಪ್ರಸನ್ನ ಎಚ್‌., ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ. ಹಾಕೆ, ತಹಸೀಲ್ದಾರ್‌ ಶ್ರೀನಿವಾಸ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

14ರಿಂದ ಗೃಹಲಕ್ಷ್ಮೇಯರಿಂದ ಅರ್ಜಿ ಸ್ವೀಕಾರ

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್‌, ಜುಲೈ 14ರಿಂದ ಗೃಹಲಕ್ಷ್ಮೇ ಯೋಜನೆಯ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ ಎಂದರು.

 

ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಅಧಿಕಾರಿ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದ ಸಾವು : ತನಿಖೆಗೆ ಕುಟುಂಬಸ್ಥರು ಒತ್ತಾಯ

ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಅಧಿಕಾರಿ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದ ಸಾವು : ತನಿಖೆಗೆ ಕುಟುಂಬಸ್ಥರು ಒತ್ತಾಯ

ಈ ಯೋಜನೆಗಾಗಿಯೇ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ 33,000 ಕೋಟಿ ರು. ಅನುದಾನ ನೀಡಿದ್ದಾರೆ. ಖಂಡಿತವಾಗಿಯೂ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ಈ ಯೋಜನೆ ತಲುಪಿಸುತ್ತೇನೆ. ಭಗವಂತನ ಸಾಕ್ಷಿಯಾಗಿ ಹೇಳುತ್ತೇನೆ, ಸರ್ಕಾರ ನನಗೆ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸುತ್ತೇನೆ ಎಂದರು.

click me!