ಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ

By Kannadaprabha News  |  First Published Dec 19, 2023, 5:28 AM IST

ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.


ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

ರಾಜ್ಯದ ಯಾವುದೇ ಭಾಗದ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷಣ ರೂಪಾಯಿ ಬಹುಮಾನ ಹಣ ನೀಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Latest Videos

undefined

ಭ್ರೂಣಹತ್ಯೆ ಕೇಸ್‌ ಸಿಐಡಿ, ಎಸ್‌ಐಟಿ ತನಿಖೆಗೆ ನೀಡಲು ಚಿಂತನೆ: ಸಚಿವ ಚಲುವರಾಯಸ್ವಾಮಿ

ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದ್ದು, 080-25202264/65ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ. 

ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಲಿಂಗ ಪತ್ತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಚಿವರು, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು. ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.

ಅಧಿಕಾರಿಗಳ ಬೇಜವಾಬ್ದಾರಿತನವೇ ಹೆಣ್ಣು ಭ್ರೂಣ ಹತ್ಯೆಗೆ ಕಾರಣ: ಸಚಿವ ದಿನೇಶ್‌ ಗುಂಡೂರಾವ್

click me!