78 ಲಕ್ಷ ರೈತರ ಜಮೀನಿಗೆ ಆಧಾರ್‌ ಜೋಡಣೆ: ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿ..!

By Kannadaprabha News  |  First Published Oct 7, 2022, 3:30 AM IST

ನ್ಯಾನೋ ಯೂರಿಯಾ ಕ್ರಾಂತಿ ಸೃಷ್ಟಿಸಿದೆ. ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿ ಸ್ಥಾಪಿಸಿದೆ. ಇದನ್ನು ರೈತರಿಗೂ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲ ದೊರೆಯುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ


ಬೆಂಗಳೂರು(ಅ.07):  ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ರೈತರ ಜಮೀನುಗಳ ಸರ್ವೆ ನಂಬರ್‌ಗೆ ಆಧಾರ್‌ ಜೋಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈವರೆಗೆ 78 ಲಕ್ಷ ರೈತರನ್ನು ಈ ವ್ಯಾಪಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನೈಸರ್ಗಿಕ ಮತ್ತು ಡಿಜಿಟಲ್‌ ಕೃಷಿ ಕುರಿತ ವರ್ಚುವಲ್‌ ವಿಡಿಯೋ ಸಂವಾದದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೇ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ರಾಜ್ಯದಲ್ಲಿ ಜಾರಿಗೆ ತಂದ ಫಟ್ಸ್‌ ಯೋಜನೆಯನ್ನು ಎಲ್ಲ ರಾಜ್ಯಗಳೂ ಅಳವಡಿಸಿಕೊಳ್ಳುತ್ತಿವೆ. ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಜತೆಗೆ ಡಿಜಿಟಲ್‌ ತಂತ್ರಜ್ಞಾನದ ಮೂಲಕ ತಮ್ಮ ಭೂಮಿ ಹಾಗೂ ಬೆಳೆ ಸಮೀಕ್ಷೆಯನ್ನೂ ರೈತರೇ ಮಾಡುತ್ತಿದ್ದಾರೆ. ಈವರೆಗೆ 212 ಕೋಟಿ ಭೂ ಪ್ರದೇಶವನ್ನು ಡಿಜಿಟಲೀಕರಣಗೊಳಿಸಲಾಗಿದೆ. 2.12 ಕೋಟಿ ಪೈಕಿ 16,584 ಭೂ ಪ್ರದೇಶವನ್ನು ರೈತರೇ ಸಮೀಕ್ಷೆ ಮಾಡಿದ್ದಾರೆ. 1.61 ಕೋಟಿ ಪ್ರದೇಶವನ್ನು ಇಲಾಖೆ ಮಾಡಿದೆ. ಯಾವುದೇ ವ್ಯಾಜ್ಯಕ್ಕೆ ಎಡೆ ಮಾಡಿಕೊಡದಿರಲು ಶೇ.100ರಷ್ಟು ರೈತರೇ ಸಮೀಕ್ಷೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.

Tap to resize

Latest Videos

ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಅಸಮರ್ಪಕ: ಎಚ್‌.ಸಿ.ಮಹದೇವಪ್ಪ

ಕ್ರಾಂತಿಕಾರಿ ನ್ಯಾನೋ ಯೂರಿಯಾ:

ನ್ಯಾನೋ ಯೂರಿಯಾ ಕ್ರಾಂತಿ ಸೃಷ್ಟಿಸಿದೆ. ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿ ಸ್ಥಾಪಿಸಿದೆ. ಇದನ್ನು ರೈತರಿಗೂ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲ ದೊರೆಯುವ ವಿಶ್ವಾಸವಿದೆ. ಕೇಂದ್ರ ಸರ್ಕಾರದ ಸ್ವಾಮಿತ್ವ ಯೋಜನೆಯನ್ನು ಕರ್ನಾಟಕದಲ್ಲಿ ಅಭಿಯಾನದ ರೀತಿಯಲ್ಲಿ ಕೈಗೊಳ್ಳಲಾಗಿದೆ. ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆಯಾಗಿದ್ದು, ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅತ್ಯಂತ ಪ್ರಮುಖ ಅಂಶಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Electoral Reforms: ವೋಟರ್‌ ಐಡಿ ಜತೆ ಆಧಾರ್‌ ಜೋಡಣೆ ಕಡ್ಡಾಯವಲ್ಲ!

ನೈಸರ್ಗಿಕ ಕೃಷಿಯಲ್ಲಿ ರಾಜ್ಯ ಸಕ್ರಿಯ:

ಪ್ರಧಾನಿ ನರೇಂದ್ರ ಮೋದಿಯವರ ರೈತರ ಆದಾಯ ದ್ವಿಗುಣಗೊಳಿಸುವ ಆಶಯದಂತೆ ಕರ್ನಾಟಕ ರಾಜ್ಯ ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿ ಯನ್ನು ಸಕ್ರಿಯವಾಗಿ ಕೈಗೊಂಡಿದೆ. ರಾಜ್ಯದಲ್ಲಿ 5 ಕೃಷಿ ಹಾಗೂ ತೋಟಗಾರಿಕಾ ವಿಶ್ವ ವಿದ್ಯಾಲಯಗಳಿದ್ದು, ವಿಶ್ವವಿದ್ಯಾಲಯಗಳ ನಿರಂತರ ಮೇಲ್ವಿಚಾರಣೆಯಲ್ಲಿ ನೈಸರ್ಗಿಕ ಕೃಷಿಯನ್ನು ತಲಾ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ. ಬೆಳೆಗಳ ಗುಣಮಟ್ಟದಿಂದ ಹಿಡಿದು, ಉತ್ಪನ್ನ, ಪರೀಕ್ಷೆಗಳನ್ನು ಕೃಷಿ ಪ್ರಯೋಗಾಲಯದಲ್ಲಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಮಾರ್ಚ್‌ ಒಳಗೆ 1 ಲಕ್ಷ ಎಕರೆ ನೈಸರ್ಗಿಕ ಕೃಷಿಗೆ ಪರಿವರ್ತನೆ:

ರಾಜ್ಯದಲ್ಲಿ 2.4 ಲಕ್ಷ ಎಕರೆ ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಕ್ರಮೇಣ ಪರಿವರ್ತಿಸಲಾಗುತ್ತಿದೆ. ಮುಂದಿನ ಮಾರ್ಚ್‌ ಒಳಗೆ ಹೊಸದಾಗಿ 1 ಲಕ್ಷ ಎಕರೆ ಪ್ರದೇಶವನ್ನು ನೈಸರ್ಗಿಕ ಕೃಷಿಗೆ ಪರಿವರ್ತಿಸುವ ಗುರಿ ಇದೆ. ನೈಸರ್ಗಿಕ ಕೃಷಿಗೆ 41, 434 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, 1100 ತರಬೇತಿ ಕಾರ್ಯಕ್ರಮಗಳು, 200 ಕ್ಷೇತ್ರ ಅಧ್ಯಯನ ಭೇಟಿ ಹಾಗೂ ಕಾರ್ಯಾಗಾರಗಳನ್ನು ಕೈಗೊಳ್ಳಲಾಗಿದೆ ಎಂದರು.
 

click me!