ಸರ್ಕಾರಿ ಆಸ್ಪತ್ರೇಲಿ ಡಯಾಲಿಸಿಸ್ ಸೇವೆಗೆ ಇನ್ನು ಆಧಾರ್‌ ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

Kannadaprabha News   | Kannada Prabha
Published : Jun 15, 2025, 06:44 AM IST
Aadhaar Card

ಸಾರಾಂಶ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ಪಡೆಯುವವರು ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ದೃಢೀಕರಣ ನೀಡುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು (ಜೂ.15): ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ಪಡೆಯುವವರು ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ದೃಢೀಕರಣ ನೀಡುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್‌ ಕಾರ್ಯಕ್ರಮ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಇದರಡಿ ಯಾವುದೇ ಡಿಬಿಟಿ (ನಗದು ನೇರ ವರ್ಗಾವಣೆ) ಹಣ ವರ್ಗಾವಣೆಗೆ ಆಧಾರ್‌ ಸಂಖ್ಯೆ ಅಗತ್ಯವಿರುವ ಹಿನ್ನೆಲೆಯಲ್ಲಿ ಡಯಾಲಿಸಿಸ್‌ ಸೇವೆಯ ಪ್ರಯೋಜನ ಪಡೆಯಲು ಬಯಸುವ ವ್ಯಕ್ತಿಯು ಆಧಾರ್‌ ಹೊಂದಿರುವ ದಾಖಲೆ ಸಲ್ಲಿಸಬೇಕು ಅಥವಾ ಆಧಾರ್ ದೃಢೀಕರಣಕ್ಕೆ ಒಳಗಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಯಾವುದೇ ವ್ಯಕ್ತಿ ಆಧಾರ್‌ ಹೊಂದಿಲ್ಲದ್ದರೆ ಅಥವಾ ಈವರೆಗೆ ಆಧಾರ್‌ಗೆ ನೋಂದಣಿ ಆಗದಿದ್ದು, ಆಧಾರ್‌ ಕಾಯ್ದೆಯ ಸೆಕ್ಷನ್‌ 3ರ ಪ್ರಕಾರ ಆಧಾರ್‌ ಪಡೆಯಲು ಅರ್ಹರಾಗಿದ್ದರೆ ಅವರು ಆಧಾರ್‌ಗೆ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಫಲಾನುಭವಿಗಳು ಮಕ್ಕಳಾಗಿದ್ದರೆ ತನ್ನ ತಂದೆ, ತಾಯಿ ಅಥವಾ ಪೋಷಕರ ಒಪ್ಪಿಗೆಗೆ ಒಳಪಟ್ಟು ಆಧಾರ್‌ ನೋಂದಣಿಗೆ ಅರ್ಜಿಸಲ್ಲಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಒಂದೊಮ್ಮೆ ಅವರ ಸಮೀಪದಲ್ಲಿ ಆಧಾರ್‌ ನೋಂದಣಿ ಕೇಂದ್ರ ಇಲ್ಲದಿದ್ದರೆ ಇಲಾಖೆಯು ಯೋಜನೆ ಅನುಷ್ಠಾನಗೊಳಿಸುತ್ತಿರುವ ಏಜೆನ್ಸಿಯ ಮೂಲಕ ಆಧಾರ್‌ ನೋಂದಣಿ ಕೇಂದ್ರದ ಸೌಲಭ್ಯವನ್ನು ಅನುಕೂಲಕರ ಸ್ಥಳಗಳಲ್ಲಿ ನೀಡಬೇಕು.

ಆಧಾರ್‌ ಸಿಗುವವರೆಗೆ 5 ವರ್ಷದೊಳಗಿನ ಮಕ್ಕಳು ಆಧಾರ್‌ ದಾಖಲಾತಿ ಗುರುತಿನ ಚೀಟಿ ಅಥವಾ ಬಯೋಮೆಟ್ರಿಕ್‌ ನವೀಕರಣ ಗುರುತಿನ ಚೀಟಿ ನೀಡುವ ಷರತ್ತಿನೊಂದಿಗೆ ಜನನ ಪ್ರಮಾಣಪತ್ರ ಅಥವಾ ಸಕ್ಷಮ ಪ್ರಾಧಿಕಾರದಿಂದ ವಿತರಿಸಿರುವ ಜನನ ದಾಖಲೆ ಅಥವಾ ಶಾಲೆಯ ಮುಖ್ಯಸ್ಥರಿಂದ ಸಹಿ ಮಾಡಿರುವ ಶಾಲಾ ಗುರುತಿನ ಚೀಟಿ ನೀಡಬಹುದು. 18 ವರ್ಷ ಮೇಲಟ್ಟವರಾದರೆ ಆಧಾರ್‌ ಪಡೆಯಲು ನೋಂದಣಿಮಾಡಿರುವ ಎನ್‌ರೋಲ್‌ಮೇಂಟ್‌ ಸಂಖ್ಯೆ ಚೀಟಿ ಹಾಗೂ ಈ ಭಾವಚಿತ್ರಹೊಂದಿರುವ ಬ್ಯಾಂಕ್‌ ಅಥವಾ ಅಂಚೆಕಚೇರಿ ಪಾಸ್‌ಬುಕ್‌, ಪ್ಯಾನ್‌, ಪಾಸ್‌ಪೋರ್ಟ್‌, ಪಡಿತರ ಚೀಟಿಯಂತಹ ಹತ್ತು ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬಹುದು. ಆಧಾರ್‌ ಬಯೋಮೆಟ್ರಿಕ್‌ ವಿಫಲವಾದರೆ ಕಣ್ಣು (ಐರಿಸ್) ಹಾಗೂ ಮುಖದ ದೃಢೀಕರಣ ಅಳವಡಿಸಿಕೊಳ್ಳಬೇಕು. ಅವೂ ವಿಫಲವಾದರೆ ಆಧಾರ್‌ ಓಟಿಪಿ ಪಡೆಯಬೇಕು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.

ಡಯಾಲಿಸಿಸ್‌ ಸೇವೆ ನಿರಾಕರಿಸುವಂತಿಲ್ಲ: ಆಧಾರ್‌ ಇಲ್ಲ ಎಂಬ ಕಾರಣಕ್ಕೆ ಡಯಾಲಿಸಿಸ್ ಸೇವೆ ನಿರಾಕರಿಸುವಂತಿಲ್ಲ. ಗುರುತನ್ನು ಪರಿಶೀಲಿಸುವ ಮೂಲಕ ಮಗುವಿಗೆ ಅಥವಾ ವ್ಯಕ್ತಿಗೆ ಸೌಲಭ್ಯ ನೀಡಬೇಕು. ಆಧಾರ್‌ ಅಲ್ಲದೆ ಇತರೆ ದಾಖಲೆಗಳ ಆಧಾರದ ಮೇಲೆ ಸೌಲಭ್ಯ ನೀಡಿದ ಸಂದರ್ಭದಲ್ಲಿ ಅದನ್ನು ದಾಖಲಿಸಲು ಪ್ರತ್ಯೇಕ ರಿಜಿಸ್ಟಾರ್‌ ನಿರ್ವಹಿಸಬೇಕು. ಅನುಷ್ಠಾನ ಏಜೆನ್ಸಿಯ ಮೂಲಕ ನಿಯಮಿತವಾಗಿ ಪರಿಶೀಲಿಸಿ ಲೆಕ್ಕಪರಿಶೋಧನೆ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!