ಸಂತೋಷ್‌ ಆತ್ಮಹತ್ಯೆ ಕೇಸ್‌: ಎರಡೂ ಪಕ್ಷಗಳಿಗೆ ಮಾತನಾಡುವ ನೈತಿಕತೆ ಇಲ್ಲ: ಭಾಸ್ಕರ್ ರಾವ್

Published : Apr 16, 2022, 12:07 PM IST
ಸಂತೋಷ್‌ ಆತ್ಮಹತ್ಯೆ ಕೇಸ್‌: ಎರಡೂ ಪಕ್ಷಗಳಿಗೆ ಮಾತನಾಡುವ ನೈತಿಕತೆ ಇಲ್ಲ: ಭಾಸ್ಕರ್ ರಾವ್

ಸಾರಾಂಶ

*  ಸಂತೋಷ್‌ ಪಾಟೀಲ್ ಮನವಿ ಕೊಟ್ಟಿದ್ದ ವೇಳೆ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು *  ಸಾಮಾನ್ಯ ಜನ ಯಾರಾದ್ರು ಆತ್ಮಹತ್ಯೆಗೆ ಕಾರಣರಾಗಿದ್ದರೆ ಅವರನ್ನು ಬಂಧಿಸುತ್ತಿದ್ದರು‌ *  ಎಫ್‌ಐಆರ್‌ನಲ್ಲಿ ಇರುವ ಆರೋಪಿಗಳ ಬಂಧಿಸಬೇಕು   

ಬೆಳಗಾವಿ(ಏ.16): ವಿಶ್ವಾಸ ಮೇಲೆ ಸಂತೋಷ್‌ ಪಾಟೀಲ್(Santosh Patil) ಕೆಲಸ ಮಾಡಿದ್ದರು. ಅವಮಾನ ಮಾಡಿ, ಕಾಯಿಸಿದ್ದು ಆತ್ಮಹತ್ಯೆಗೆ ಕಾರಣವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಮಗಾರಿ ಪ್ರಾರಂಭವಾದ ಬಳಿಕವಾದ್ರೂ ಹಣ ಬಿಡುಗಡೆ ಮಾಡಿಸಬೇಕಿತ್ತು. ಎರಡೂ ಪಕ್ಷಗಳು ಮೊಸಳೆ ಕಣ್ಣೀರು ಹಾಕೋದು ಬಿಡಬೇಕು. ಆಪ್‌ಗೆ ಮಾತ್ರ ಈ ಬಗ್ಗೆ ಮಾತನಾಡಲು ನೈತಿಕ ಹಕ್ಕು ಇದೆ ಅಂತ ಆಪ್ ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್(Bhaskar Rao) ಹೇಳಿದ್ದಾರೆ. 

ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ(Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ(Belagavi) ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಎಎಪಿ(AAP) ಸ್ಪರ್ಧೆ ಮಾಡಲಿದೆ. ಪ್ರಭಾವಿಗಳನ್ನು ಮುಟ್ಟೋಕೂ ಆಗಲ್ಲ ಎನ್ನುವ ಭ್ರಮೆಯನ್ನ ತಗೆದು ಹಾಕುತ್ತೇವೆ. ಪ್ರಚಾರನೂ ಮುಖ್ಯ ಅಲ್ಲ, ವ್ಯಕ್ತಿಗಳೂ ಮುಖ್ಯ ಅಲ್ಲ. ಪಕ್ಷಗಳ ದುರಾಡಳಿತ, ಭ್ರಷ್ಟಾಚಾರ(Corruption) ಬಗ್ಗೆ ಮಾತನಾಡಿದ್ದೇನೆ. ಭ್ರಷ್ಟಾಚಾರದಿಂದ ನೇರವಾಗಿ ಜನರ ಮೇಲೆ ಪರಿಣಾಮ ಬೀರಲಿದೆ ಅಂತ ತಿಳಿಸಿದ್ದಾರೆ. 

ಸಂತೋಷ್ ಸಾವಿಗೆ ರೋಚಕ ತಿರುವು, ಲಾಡ್ಜ್‌ನಲ್ಲಿ ಪತ್ತೆಯಾಯ್ತು ನಿಷೇಧಿತ ಕೀಟನಾಶಕ

ಸಂತೋಷ್‌ ಪಾಟೀಲ್ ಮನವಿ ಕೊಟ್ಟಿದ್ದ ವೇಳೆ ಸರ್ಕಾರ(Government of Karnataka) ಎಚ್ಚೆತ್ತುಕೊಳ್ಳಬೇಕಿತ್ತು. ಪ್ರಕರಣ ಸಿಐಡಿ(CID) ತನಿಖೆಗೆ ಕೊಡ್ತಿವಿ ಅಂತ ಯಾರೊಬ್ಬರು ಹೇಳಿಲ್ಲ. ಸಾಮಾನ್ಯ ಜನ ಯಾರಾದ್ರು ಆತ್ಮಹತ್ಯೆಗೆ ಕಾರಣರಾಗಿದ್ದರೆ ಅವರನ್ನು ಬಂಧಿಸುತ್ತಿದ್ದರು‌. ಎಫ್‌ಐಆರ್‌ನಲ್ಲಿ(FIR) ಇರುವ ಆರೋಪಿಗಳ ಬಂಧನ ಆಗಬೇಕು. ಇಂತಹ ಪ್ರಕರಣದಲ್ಲಿ ಸರ್ಕಾರವೇ ತನಿಖಾಧಿಕಾರಿ ಆಗುತ್ತೆ. ಆದರೆ ತನಿಖಾಧಿಕಾರಿಗಳಿಗೆ ಎಲ್ಲಾ ಸ್ವಾತಂತ್ರ್ಯ ಕೊಡಬೇಕು. ಕೋರ್ಟ್ ಕಣ್ಗಾವಲಿನಲ್ಲಿ ಪ್ರಕರಣ ತನಿಖೆ ಆಗಬೇಕು. ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡೋ ಸಾಧ್ಯತೆ ಹೆಚ್ಚಿದೆ. ಪೊಲೀಸರು(Police) ಇಂತಹ ಪ್ರಕರಣಗಳಲ್ಲಿ ಹೇಳಿದ ಹಾಗೆ ಕೇಳುವವರಾಗಿ ಬಿಡುತ್ತಾರೆ. ಪೊಲೀಸ್ ತನಿಖೆ ಬಗ್ಗೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್ ಅನುಮಾನ ವ್ಯಕ್ತಪಡಿಸಿದ್ದಾರೆ. 

'ಸಂತೋಷ ಸಾವಿಗೂ ಡಿಕೆಶಿ, ಹೆಬ್ಬಾಳ್ಕರ್‌ಗೂ ಏನು ಸಂಬಂಧ?'

ಕೊಪ್ಪಳ: ಸಚಿವ ಕೆ.ಎಸ್‌. ಈಶ್ವರಪ್ಪ(KS Eshwarappa) ಅವರ ಹೆಸರನ್ನು ಸಂತೋಷ ಪಾಟೀಲ್‌ ಅವರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಾಗ ವಿನಾಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಹೆಸರನ್ನು ಎಳೆದು ತರುವುದು ಸರಿಯಲ್ಲ. ಕೇಸ್‌ಗೂ- ಅವರಿಗೂ ಏನು ಸಂಬಂಧ? ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ(Basavaraj Rayareddy) ಅವರು ಖಾರವಾಗಿ ಪ್ರಶ್ನಿಸಿದರು.

Santosh Suicide Case: ಕಾಂಗ್ರೆಸ್ಸಿಗರು ತನಿಖಾಧಿಕಾರಿಗಳಾಗುವುದು ಬೇಡ: ಸಿಎಂ ಬೊಮ್ಮಾಯಿ

ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್‌(Congress) ಹಮ್ಮಿಕೊಂಡಿದ್ದ ಪ್ರತಿಭಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಹೀಗೆಲ್ಲಾ ಹಗುರವಾಗಿ ಮಾತನಾಡುವುದು ಮತ್ತು ಆರೋಪ ಮಾಡುವುದು ಸರಿಯಲ್ಲ ಎಂದು ಕಿವಿಮಾತು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ