
ಬೆಂಗಳೂರು(ಜು.04): ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಂಚ ಪ್ರಕರಣ ಸಂಬಂಧ ಬೆಂಗಳೂರು ಮಾಜಿ ಜಿಲ್ಲಾಧಿಕಾರಿ ಮಂಜುನಾಥ್ ಬಂಧನವಾಗಿದೆ. ಎಸಿಬಿ ಅಧಿಕಾರಿಗಳು ಮುಂಜುನಾಥ್ ಬಂಧಿಸಿದ್ದಾರೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆ ಲಂಚನ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಹೀಗಾಗಿ ಈ ಪ್ರಕರಣ ಐಎಸ್ ಅಧಿಕಾರಿ ಮಂಜುನಾಥ್ ಕಡೆ ತಿರುಗಿತ್ತು.
ಎಸಿಬಿ ಅಧಿಕಾರಿಗಳು ಈಗಾಗಗಲೇ ಮಂಜುನಾಥ್ ಕರೆಸಿ ವಿಚಾರಣೆ ನಡೆಸಿದ್ದರು. ವಿಚಾರಣೆಯಲ್ಲಿ ನೀಡಿದ ಹೇಳಿಕೆಗೆ ಆಧರಿಸಿ ತನಿಖೆ ಮುಂದುವರಿಸಿದ ಅಧಿಕಾರಿಗಳಿಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿತ್ತು. ಇದರ ಹಿನ್ನಲೆಯಲ್ಲಿ ಮುಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಹೈಕೋರ್ಟ್ ಛೀಮಾರಿ
ಮುಂಜುನಾಥ್ ವಿರುದ್ಧ ಎಸಿಬಿ ಅಧಿಕಾರಿಗಳು ಲಂಚ ಪ್ರಕರಣ ತನಿಖೆಗೆ ಚುರುಕುಗೊಳಿಸುತ್ತಿದ್ದಂತೆ ಸರ್ಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಿಂದ ಮುಂಜುನಾಥ್ ಅವರನ್ನು ಸಮಗ್ರ ಶಿಶು ಅಭಿವೃದ್ಧಿ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿತ್ತು. ಜಮೀನು ಕುರಿತು ತಮ್ಮ ಪರವಾಗಿ ಆದೇಶ ನೀಡಲು ಅಜಂ ಪಾಶಾ ಅವರಿಂದ 5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಎಸಿಬಿ ದಾಳಿ ಮಾಡಿತ್ತು. ಮುಂಜುನಾಥ್ ಆದೇಶದಂತೆ ಅಜಂ ಪಾಶಾ ಜಿಲ್ಲಾಧಿಕಾರಿ ಕಚೇರಿ ವ್ಯವಸ್ಥಾಪಕ ಮಹೇಶ್ ಹಾಗೂ ಸಹಾಯಕ ಚೇತನ್ ಲಂಚ ಸ್ವೀಕರಿಸಿದ್ದರು. ಈ ವೇಳೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಇಬ್ಬರು ಕಚೇರಿ ಅಧಿಕಾರಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಈ ಲಂಚ ಮುಂಜುನಾಥ್ ನಿರ್ದೇಶದ ಮೇರೆ ಪಡೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಜಿಲ್ಲಾಧಿಕಾರಿ ಮುಂಜನಾಥ್ ವಿರುದ್ಧದ ತನಿಖೆ ಚುರುಕುಗೊಳಿಸಲಾಗಿತ್ತು.
ಅಜಂ ಪಾಷಾ ನೀಡಿದ್ದ ಕೂರಿನಲ್ಲಿ ಮಂಜುನಾಥ್ ಹೆಸರು ಉಲ್ಲೇಖಿಸಲಾಗಿತ್ತು. ಇಷ್ಟೇ ಅಲ್ಲ ಫೋನ್ ವಿವರಗಳನ್ನು ನೀಡಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಮೂರನೇ ಅರೋಪಿಯಾಗಿ ಮಂಜುನಾಥ್ ಹೆಸರು ಉಲ್ಲೇಖಿಸಲಾಗಿದೆ.
ಸರ್ಕಾರಿ ಕಚೇರಿಗಳಿಗೆ ಇನ್ನು ಎಸಿಬಿ ಅನಿರೀಕ್ಷಿತ ಭೇಟಿ
ಮಂಜುನಾಥ್ ಬಂಧನ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ ನಡೆಯಲಿದೆ. ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಕಾನೂನಿಗೆ ತಲೆಬಾಗಲೇ ಬೇಕು. ಸಾಕ್ಷಿ ಆಧಾರಗಳನ್ನು ಇಟ್ಟುಕೊಂಡು ಅಧಿಕಾರಿಗಳು ಬಂಧನ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಕಾನೂನು ಉಲ್ಲಂಘಿಸುವರಿಗೆ ತಕ್ಕ ಪಾಠ ಕಲಿಸಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಪ್ರಕರಣ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿ ಭ್ರಷ್ಟಾಚಾರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಹಿಂದಿನ ಸರ್ಕಾರಗಳು ಅದನ್ನು ಬಹಿರಂಗ ಪಡಿಸಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಯಾವುದೂ ಮುಚ್ಚಿಡಲ್ಲ. ಭ್ರಷ್ಟಾಚಾರ ನಡೆಸಿದ ಅಧಿಕಾರಿಯನ್ನು ದಾಳಿ ಮಾಡಿ ಬಂಧಿಸಿದ್ದಾರೆ. ಆದೇಶ ಎಲ್ಲಾ ಸಮಯದಲ್ಲೂ ಕೊಡುತ್ತಾ ಬಂದ್ದೇವೆ. ಆದರೆ ಅದರಂತೆ ನಡೆದುಕೊಂಡಿಲ್ಲ ಎಂದು ಜ್ಞಾನೇಂದ್ರ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ