Jal Jeevan Mission, ನರೇಗಾದಲ್ಲಿ ಗುರಿ ಮೀರಿ ಸಾಧನೆ: ಸಚಿವ ಈಶ್ವರಪ್ಪ

Kannadaprabha News   | Asianet News
Published : Feb 12, 2022, 05:22 AM IST
Jal Jeevan Mission, ನರೇಗಾದಲ್ಲಿ ಗುರಿ ಮೀರಿ ಸಾಧನೆ: ಸಚಿವ ಈಶ್ವರಪ್ಪ

ಸಾರಾಂಶ

*  6357 ಹಳ್ಳಿಗಳಿಗೆ ನೀರು, 61 ಲಕ್ಷ ಜನರಿಗೆ ಉದ್ಯೋಗ *  ಕೋವಿಡ್‌ ಸಂಕಷ್ಟದಲ್ಲಿ ನೆರವು *  ನರೇಗಾ ಉತ್ತಮ ಸಾಧನೆ

ಬೆಂಗಳೂರು(ಫೆ.12): ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಮಹತ್ವಾಕಾಂಕ್ಷಿ ಯೋಜನೆ ಮನೆ ಮನೆಗೂ ಗಂಗೆ (Jal Jeevan Mission) ಮತ್ತು ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ರಾಜ್ಯವು 2021-22ನೇ ಸಾಲಿನಲ್ಲಿ ಗುರಿ ಮೀರಿದ ಸಾಧನೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ(KS EShwarappa) ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಇಲಾಖೆಯ ಸಾಧನೆ ಕುರಿತು ಮಾತನಾಡಿದ ಅವರು, ಜಲಜೀವನ ಮಿಷನ್‌ ಯೋಜನೆ ರಾಜ್ಯದಲ್ಲಿ ಅತಿ ವೇಗವಾಗಿ ಅನುಷ್ಠಾನಗೊಳ್ಳುತ್ತಿರುವುದು ಸಂತಸದ ಸಂಗತಿ. ಸಚಿವ ಸಂಪುಟ ಸಭೆಯಲ್ಲಿ(Cabinet Meeting) ಒಂದೇ ಬಾರಿಗೆ 16 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 6,357 ಹಳ್ಳಿಗಳ 6,17,607 ಮನೆಗಳಿಗೆ ಕೊಳಾಯಿ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತದೆ ಎಂದರು.
ಈವರೆಗೆ ಒಟ್ಟು 45.44 ಲಕ್ಷ ಮನೆಗಳಿಗೆ ನೀರು ಸಂಪರ್ಕ(Water Connection) ನೀಡಲಾಗಿದೆ. 2020-21ರಲ್ಲಿ 3.43 ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ದೊರೆತಿದೆ. ಅಂತೆಯೇ 2021-22ನೇ ಸಾಲಿನಲ್ಲಿ 25.17ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ನೀಡುವ ಹೊಂದಲಾಗಿದ್ದು, ಈಗಾಗಲೇ 17.60 ಲಕ್ಷ ಕುಟುಂಬಗಳಿಗೆ ಮನೆಯಲ್ಲಿ ಕೊಳಾಯಿ ಸಂಪರ್ಕ ನೀಡಲಾಗಿದೆ. 2022-23ರಲ್ಲಿ 27.14 ಲಕ್ಷ ಮತ್ತು 23-24ರಲ್ಲಿ 14.45 ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ಕಲ್ಪಿಸಿ ಇಡೀ ರಾಜ್ಯದ 97.91 ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

TP, ZP Elections 'ಜಿ.ಪಂ,ತಾ.ಪಂ ಚುನಾವಣೆ, ಎಸ್ಸಿ,ಎಸ್ಟಿಗೆ ಮಾತ್ರ ಮೀಸಲಾತಿ'

ನರೇಗಾ ಉತ್ತಮ ಸಾಧನೆ:

ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿಯೂ(MGNREGA) 2021-22ನೇ ಸಾಲಿನಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಕೇಂದ್ರ ಸರ್ಕಾರ(Central Government) ರಾಜ್ಯಕ್ಕೆ(KArnataka) ಆನುಮೋದಿಸಿದ್ದ 13 ಕೋಟಿ ಮಾನವ ದಿನಗಳನ್ನು ಡಿಸೆಂಬರ್‌ ತಿಂಗಳಲ್ಲಿಯೇ ಪೂರ್ಣಗೊಳಿಸಿದ ನಂತರ ಮತ್ತೆ 1.40 ಕೋಟಿ ಮಾನವ ದಿನಗಳ ಹೆಚ್ಚುವರಿ ಉದ್ಯೋಗ ನೀಡಲು ರಾಜ್ಯಕ್ಕೆ ಹೆಚ್ಚುವರಿಯಾಗಿ 715 ಕೋಟಿ ರು. ಅನುದಾನ ಲಭ್ಯವಾಯಿತು. 32.41 ಲಕ್ಷ ಕುಟುಂಬಗಳ 60.87 ಲಕ್ಷ ಜನರಿಗೆ ಉದ್ಯೋಗ(Job) ನೀಡಲಾಗಿದೆ. 30.05 ಲಕ್ಷ ಮಹಿಳೆಯರು, 5.80 ಲಕ್ಷ ಹಿರಿಯ ನಾಗರಿಕರಿಗೆ ಮತ್ತು 22,400 ಲಕ್ಷಕ್ಕೂ ಹೆಚ್ಚು ವಿಕಲಚೇತನದವರಿಗೆ ಉದ್ಯೋಗ ನೀಡಲಾಗಿದೆ. ಒಟ್ಟು 4,064 ಕೋಟಿ ರು. ಕೂಲಿ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ವರ್ಷ ದಾಖಲೆಯ 13.61 ಲಕ್ಷ ಕಾಮಗಾರಿಗಳನ್ನು ತೆಗೆದುಕೊಂಡು ಈಗಾಗಲೇ 4.31 ಲಕ್ಷ ಕಾಮಗಾರಿಗಳನ್ನು ಪೂರ್ಣ ಮಾಡಲಾಗಿದೆ ಎಂದು ವಿವರಿಸಿದರು.

ಕೋವಿಡ್‌ ಸಂಕಷ್ಟದಲ್ಲಿ ನೆರವು:

ಕೋವಿಡ್‌(Covid-19) ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕರಿಗೆ ಕೆಲಸ ಒದಗಿಸುವುದರಲ್ಲಿಯೂ ನಾವು ಸಫಲರಾಗಿದ್ದೇವೆ. ಜಲಶಕ್ತಿ ಅಭಿಯಾನದಲ್ಲಿ ರಾಜ್ಯದಲ್ಲಿ 8.92 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡು 4.87 ಲಕ್ಷ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರಲ್ಲಿ ನಾವು ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದಲ್ಲಿದ್ದೇವೆ. ನರೇಗಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನದಿಂದ(Grants) ಕಳೆದ 6 ವರ್ಷದಲ್ಲಿ 3,275 ಅಂಗನವಾಡಿ ಕಟ್ಟಡಗಳನ್ನು ನಿರ್ಮಾಣವನ್ನು ಕೈಗೆತ್ತಿಗೊಂಡು 2,335 ಕಟ್ಟಡಗಳು ಪೂರ್ಣಗೊಳಿಸಲಾಗಿದೆ. ಬೇಸಿಗೆಯಲ್ಲಿ ನೀರಿನ ಅಭಾವ ಹೆಚ್ಚಿರುವ ಕಾರಣ ಕೊಳವೆ ಬಾವಿಯಲ್ಲಿ ನೀರು ಕಡಿಮೆ. ಅದಕ್ಕಾಗಿ ಕೆರೆ, ಕಲ್ಯಾಣಿಗಳನ್ನು ಅಭಿವೃದ್ಧಿ ಮಾಡುತ್ತಿದ್ದೇವೆ. ಅಂತರ್ಜಲ ಅಭಿವೃದ್ಧಿಗೆ ಗಮನಹರಿಸಿದ್ದೇವೆ. ಅಂತರ್ಜಲ ಹೆಚ್ಚಾದರೆ ಕೊಳವೆ ಬಾವಿಗೆ ನೀರು ಬರಲಿದೆ. 600 ಕಲ್ಯಾಣಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ನೀರನ್ನು ಉಳಿಸುವ ಬೇಸಿಗೆ ಕೆಲಸ ಎಲ್ಲ ಕಡೆ ಆಗುತ್ತಿದೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್