
ಬೆಂಗಳೂರು (ಜೂ.13): ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ರಾಜ್ಯದ ಲಿಂಗಾಯತ ಮುಖ್ಯಮಂತ್ರಿಗಳು (ಲಿಂಗಾಯತ ಸಿಎಂಗಳು) ಭ್ರಷ್ಟರು ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಲಿಂಗಾಯುತ ಸಿಎಂಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಬಿಗ್ ರಿಲೀಫ್ ನೀಡಲಾಗಿದೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ರಾಜ್ಯದ ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಈ ಕುರಿತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನೂ ಮಾಡಲಾಗಿತ್ತು. ಆದರೆ, ಈ ಕುರಿತು ವಿಚಾರಣೆಯನ್ನು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಪ್ರೀತ್.ಜೆ
ಅವರು, ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಚಿವ ಬಿ.ನಾಗೇಂದ್ರ, ಜನಾರ್ಧನರೆಡ್ಡಿಗೆ ಮತ್ತೆ ಅಕ್ರಮ ಗಣಿಗಾರಿಕೆ ಉರುಳು
ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಜಾ ಆಗಿದ್ದರಿಂದ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸಿದ್ದರಾಮಯ್ಯ ಅವರ ವಿರುದ್ಧ ಶಂಕರ್ ಶೇಟ್ ಮತ್ತು ಮಲ್ಲಯ್ಯ ಹಿರೇಮಠ್ ಅವರು ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ದಾಖಲು ಮಾಡಿದ್ದರು. ಈ ಬಗ್ಗೆ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ