
ಬೆಂಗಳೂರು(ಮೇ.30): ಹಿಂದಿನ ಬಿಜೆಪಿ ಸರ್ಕಾರದ ಅಡಳಿತ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರ, ಭ್ರಷ್ಟಾಚಾರ, ಹಗರಣಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ನಿರ್ವಹಣೆ ವೇಳೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ವುಂಟಾಗಿದ್ದಾರೆ, ತಪ್ಪು ನಿರ್ಧಾರ ತೆಗೆದುಕೊಂಡಿದ್ದರೆ ಅಥವಾ ಹಗರಣಗಳು ನಡೆದಿದ್ದರೆ ಆ ಬಗ್ಗೆ ಖಂಡಿತವಾಗಿ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಮಂಗಳವಾರ (ಮೇ 30) ಕರೆದಿರುವ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗುವುದು. ಇಲಾಖೆಗೆ ಸಂಬಂಧಪಟ್ಟಈವರೆಗಿನ ಮಾಹಿತಿ ಪಡೆಯಲಾಗುವುದು. ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಈವರೆಗೆ ಪರಿಹಾರ ಸಿಗದವರ ಮಾಹಿತಿ ತೆಗೆದುಕೊಳ್ಳಲಾಗುವುದು ಎಂದರು.
'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್
ಜನರಿಗೆ ತುಂಬಾ ಹತ್ತಿರವಾಗಿರುವ ಈ ಇಲಾಖೆಯನ್ನು ಇನ್ನಷ್ಟುದೃಢ, ಪಾರದರ್ಶಕವಾಗಿ ನಡೆಸಿ, ಉತ್ತಮ ಸೇವೆ ನೀಡುವಲ್ಲಿ ಏನೇನು ಮಾಡಬೇಕು ಎಂಬ ಚರ್ಚಿಸಲಾಗುವುದು. ಅತ್ಯಂತ ಜವಾಬ್ದಾರಿಯಾಗಿ ಇಲಾಖೆ ನಿಭಾಯಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ ವಿಚಾರದ ಬಗ್ಗೆ ಮಂಗಳವಾರದ ಸಭೆಯಲ್ಲಿ ಚರ್ಚಿಸಿ ಪರಿಹರಿಸಲು ಕ್ರಮ ಜರುಗಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ