ಎಲ್ಲ ಪೌರ ಕಾರ್ಮಿಕರ ಕಾಯಂಗೆ ಕ್ರಮ: ಸಿಎಂ

Published : Nov 07, 2022, 08:05 AM IST
ಎಲ್ಲ ಪೌರ ಕಾರ್ಮಿಕರ ಕಾಯಂಗೆ ಕ್ರಮ: ಸಿಎಂ

ಸಾರಾಂಶ

ಎಲ್ಲ ಪೌರ ಕಾರ್ಮಿಕರ ಕಾಯಂಗೆ ಕ್ರಮ: ಸಿಎಂ ಭರವಸೆ ಸಮಿತಿ ರಚಿಸಿ ಶಿಫಾರಸ್ಸಿನ ಅನ್ವಯ ಕ್ರಮ ದೀನ ದಲಿತರ ಕಲ್ಯಾಣವೇ ಸರ್ಕಾರದ ಗುರಿ: ಬೊಮ್ಮಾಯಿ

ಬೆಂಗಳೂರು (ನ.7) : ರಾಜ್ಯಾದ್ಯಂತ ಇರುವ ನಗರದ ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Mysuru: ಕಾಂಗ್ರೆಸ್‌ ಗೆದ್ದರೆ ಪೌರ ಕಾರ್ಮಿಕರ ಸೇವೆ ಕಾಯಂ ಪಕ್ಕಾ: ಸಿದ್ದರಾಮಯ್ಯ

ಬೆಂಗಳೂರು ಉತ್ತರದ ಕಾನ್ಸಿರಾಂ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ‘ಬಿ.ಆರ್‌.ಅಂಬೇಡ್ಕರ್‌ ಭವನ’ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ 11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ. ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ. ದೀನದಲಿತರ ಕಲ್ಯಾಣವನ್ನೇ ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದರು.

ಮೀಸಲಾತಿ ಹೆಚ್ಚಿಸುವ ಜೇನುಗೂಡಿಗೆ ಕೈಹಾಕಬೇಡಿ ಎಂದು ನನಗೆ ಬಹಳ ಜನ ಸಲಹೆ ನೀಡಿದ್ದರು. ಆದರೂ ಅವುಗಳನ್ನು ಲೆಕ್ಕಿಸಲಿಲ್ಲ. ಮಾನವೀಯ ಗುಣವಿಲ್ಲದವರು ಎಂದಿಗೂ ಆಡಳಿತ ನಡೆಸಬಾರದು. ಜನಸಂಖ್ಯೆಗೆ ಅನುಗುಣವಾಗಿ ಸಮುದಾಯಗಳಿಗೆ ನ್ಯಾಯ ದೊರಕಿಸುವುದು ನಮ್ಮ ಧರ್ಮ. ಸಾಮಾಜಿಕ ನ್ಯಾಯವನ್ನು ಕೇವಲ ಭಾಷಣವಾಗಿಸದೇ ಕಾರ್ಯರೂಪಕ್ಕೆ ತರುತ್ತಿದ್ದೇವೆ. ಬಡವರಿಗೆ ದೀನದಲಿತರ ಒಳಿತಿಗಾಗಿ ಸರ್ಕಾರ ಕ್ರಾಂತಿಕಾರಿ ನಿರ್ಣಯಗಳನ್ನು ಕೈಗೊಂಡರೆ, ಕೆಲವರು ಗೊಂದಲ ಸೃಷ್ಟಿಸುತ್ತಾರೆ. ಅಪಸ್ವರಗಳನ್ನು ಹಾಡುತ್ತಿದ್ದಾರೆ. ಆದರೆ ನಾವು ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಪೌರ ಕಾರ್ಮಿಕರಿಗೆ ಸಂತಸದ ಸುದ್ದಿ..!

ಅಂಬೇಡ್ಕರ್‌ ಅವರು ತಿಳಿಸಿದ, ಶಿಕ್ಷಣ, ಸಂಘಟನೆ ಮತ್ತು ಹೋರಾಟವನ್ನು ಎಂದಿಗೂ ಮರೆಯಬೇಡಿ. ನಿಮ್ಮ ಹಕ್ಕನ್ನು ಪಡೆಯಲು ಶಿಕ್ಷಣ ಬಹಳ ಮುಖ್ಯ. ಸಂಘಟನೆಯಲ್ಲಿ ಶಕ್ತಿಯಿದ್ದರೆ, ಪ್ರಜಾಪ್ರಭುತ್ವದಲ್ಲಿ ಬೆಲೆ ಬರುತ್ತದೆ. ನ್ಯಾಯಸಮ್ಮತವಾದ ಹೋರಾಟ ನಡೆಸುವುದು ಸಂವಿಧಾನದ ಹಕ್ಕು ಎಂದ ಅವರು, ಕಾನ್ಶಿರಾಮ… ನಗರಕ್ಕೆ ಕುಡಿಯುವ ನೀರು, ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು