ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ , ಹೈ ಬಿಪಿ ಸಮಸ್ಯೆಗೆ ಮಾತ್ರೆ ನೀಡಿದ ವೈದ್ಯರು

Published : Aug 21, 2025, 07:43 PM IST
Mahesh Shetty Thimarody

ಸಾರಾಂಶ

  ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಕೀಲರು ಜಾಮೀನು ದೊರೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಡುಪಿ: ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ ಪ್ರಕರಣದಲ್ಲಿ, ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಬ್ರಹ್ಮಾವರದಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ, ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು.  ಹೀಗಾಗಿ ಹಿರಿಯಡ್ಕ ಸಬ್ ಜೈಲಿಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇಡಲಾಗುತ್ತದೆ. ನ್ಯಾಯಾಲಯವು ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. 

ತಿಮರೋಡಿಯನ್ನು ಬಂಧಿಸಿದ ತಕ್ಷಣವೇ ಅವರ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಪ್ರಸ್ತುತ ಆರೋಪಗಳು ನಾನ್-ಬೇಲೇಬಲ್ ಸೆಕ್ಷನ್ ಒಳಗೊಂಡಿರುವುದರಿಂದ, ಕೋರ್ಟ್ ಜಾಮೀನನ್ನು ನೀಡಲು ನಿರಾಕರಿಸಿತು. ಸೋಮವಾರ (ಆಗಸ್ಟ್ 23) ಮತ್ತೆ ವಿಚಾರಣೆ ನಡೆಯಲಿದ್ದು, ಅಂದು ವಾದ ಪ್ರತಿವಾದಗಳ ಆಧಾರದ ಮೇಲೆ ನಿರ್ಣಯ ಕೈಗೊಳ್ಳಲಾಗುತ್ತದೆ. ಕೋರ್ಟ್ ಗೆ ಹಾಜರುಪಡಿಸುವ ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ, ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದರು.

ತಿಮರೋಡಿಗೆ ಹೈ ಬಿಪಿ!

ತಿಮರೋಡಿ ಪರ ವಕೀಲ ವಿಜಯವಾಸು ಪೂಜಾರಿ ಅವರು, “ಪೊಲೀಸರು ತಿಮರೋಡಿಯವರ ಹೇಳಿಕೆಯನ್ನು ಈಗಾಗಲೇ ದಾಖಲಿಸಿದ್ದಾರೆ. ಅವರು ಹೈ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ವೈದ್ಯರಿಂದ ಮಾತ್ರೆಗಳನ್ನು ಪಡೆಯುತ್ತಿದ್ದಾರೆ. ಈ ಪ್ರಕರಣದಲ್ಲಿ ಉಲ್ಲೇಖಿಸಿರುವ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಏಳು ವರ್ಷದವರೆಗೆ ಶಿಕ್ಷೆ ಮಾತ್ರವಿದೆ. ಜೊತೆಗೆ, ದೂರಿನಲ್ಲಿ ಎರಡು ಜಾಮೀನು ರಹಿತ ಸೆಕ್ಷನ್‌ಗಳನ್ನು ಸೇರಿಸಲಾಗಿದೆ. ಆದರೆ, ಇವುಗಳಲ್ಲಿ ಗರಿಷ್ಠ ಶಿಕ್ಷೆ ಮೂರು ವರ್ಷ ಮತ್ತು ದಂಡ ಮಾತ್ರ. ಇದುವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದ್ದರಿಂದ ಸೋಮವಾರ ನೂರಕ್ಕೆ ನೂರು ಬೇಲ್ ಸಿಗುತ್ತದೆ ಎಂದು ನಾವು ವಿಶ್ವಾಸ ಹೊಂದಿದ್ದೇವೆ” ಎಂದು ಹೇಳಿದರು.

ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಉಲ್ಲೇಖ

ವಕೀಲರು ತಮ್ಮ ವಾದದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿದ ಕೆಲವು ತೀರ್ಪುಗಳನ್ನು ಉಲ್ಲೇಖಿಸಿದರು. “ಕಾನೂನು ಪ್ರಕಾರ, ಈ ಪ್ರಕರಣದಲ್ಲಿ ಜಾಮೀನು ಸಿಗಬಾರದೆಂಬ ಕಾರಣವಿಲ್ಲ. ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಮತ್ತು ಸೋಮವಾರ ತಿಮರೋಡಿಗೆ ಖಚಿತವಾಗಿ ಜಾಮೀನು ದೊರೆಯಲಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಆಗಸ್ಟ್ 16ರಂದು ಈ ಪ್ರಕರಣ ಸಂಬಂಧಿತ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಂತರ ಪೊಲೀಸರು ಕ್ರಮ ಕೈಗೊಂಡಿದ್ದರು. ಬಂಧನದ ಸಂದರ್ಭದಲ್ಲಿ ಯಾವುದೇ ಗಲಭೆ ಅಥವಾ ಶಾಂತಿ ಕದಡುವ ಘಟನೆ ನಡೆದಿಲ್ಲವೆಂಬುದನ್ನು ವಕೀಲರು ಕೋರ್ಟ್‌ನಲ್ಲಿ ಸ್ಪಷ್ಟಪಡಿಸಿದರು.

  • ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ತಿರಸ್ಕಾರ.
  • ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ.
  • ವಕೀಲರ ಪ್ರಕಾರ, ಪ್ರಕರಣದಲ್ಲಿ ಏಳು ವರ್ಷ ಅಥವಾ ಮೂರು ವರ್ಷ ಶಿಕ್ಷೆ ಇರುವ ಸೆಕ್ಷನ್‌ಗಳು ಮಾತ್ರ.
  • ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ವಾದ.
  • ಸೋಮವಾರ ಜಾಮೀನು ಖಚಿತವೆಂಬ ವಿಶ್ವಾಸ ವಕೀಲರಿಂದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?